ಬೆಳಗಾವಿ: ನಡು ರಸ್ತೆಯಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ..! 

ಆಗಸ್ಟ್ 11, 2025 - 22:29
 0  18
ಬೆಳಗಾವಿ: ನಡು ರಸ್ತೆಯಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ..! 

ಬೆಳಗಾವಿ: ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ. ಮೃತನನ್ನು ಹುಕ್ಕೇರಿ ತಾಲೂಕಿನ ಅವರಗೋಳ ಗ್ರಾಮದ 25 ವರ್ಷದ ಮಲ್ಲಿಕ್ ಹುಸೇನ ಕಿಲ್ಲೇದಾರ ಎಂದು ಗುರುತಿಸಲಾಗಿದೆ. ಮಧ್ಯಾಹ್ನ 1.30ರ ಸುಮಾರಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ಮಲ್ಲಿಕ್ ಮೇಲೆ ಆರೋಪಿಗಳು ದಾಳಿ ನಡೆಸಿ ಸಾರ್ವಜನಿಕರ ಕಣ್ಣೆದುರೇ ನಿರಂತರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ.

ಆ ಸಂದರ್ಭದಲ್ಲಿ ಪಟ್ಟಣದಲ್ಲಿ ವಾರದ ಸಂತೆ ನಡೆಯುತ್ತಿದ್ದು, ರಸ್ತೆ ಜನಸಂದಣಿಯಿಂದ ಕಿಕ್ಕಿರಿದಿತ್ತು. ಹಲ್ಲೆ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಮಲ್ಲಿಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳೀಯರಿಂದ ಮಾಹಿತಿ ಪಡೆದ ಹುಕ್ಕೇರಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ, ಶವವನ್ನು ಪೋಸ್ಟ್‌ಮಾರ್ಟಮ್‌ಗೆ ಕಳುಹಿಸಿದ್ದಾರೆ.

ಹತ್ಯೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಾಥಮಿಕ ಮಾಹಿತಿಯ ಪ್ರಕಾರ, ಹಳೆಯ ವೈಷಮ್ಯ ಅಥವಾ ವೈಯಕ್ತಿಕ ದ್ವೇಷವೇ ಕಾರಣವಾಗಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow