ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವು.!

ಹುಬ್ಬಳ್ಳಿ: ಭೀಕರ ರಸ್ತೆ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಕ್ರಾಸ್ ಬಳಿ ನಡೆದಿದೆ. ಶ್ವೇತ (29), ಅಂಜಲಿ(26), ಸಂದೀಪ್ (26), ವಿಠ್ಠಲ (55) ಮತ್ತು ಶಶಿಕಲಾ ಮೃತ ದುರ್ಧೈವಿಗಳಾಗಿದ್ದು,
ಇವರೆಲ್ಲರೂ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನವರು ಎಂದು ತಿಳಿದುಬಂದಿದೆ. ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿರುವ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು,
ಮೃತದೇಹಗಳನ್ನು ಹುಬ್ಬಳ್ಳಿಯ ಕಿಮ್ಸ್ ಗೆ ರವಾನೆ ಮಾಡಿದ್ದಾರೆ. ಹೋಟೆಲ್ ವ್ಯಾಪಾರಕ್ಕೆಂದು ಬಾಗಲಕೋಟೆಗೆ ತೆರಳುತ್ತಿದ್ದ ಸಮಯದಲ್ಲಿ ಈ ದುರ್ಘಟನೆ ನಡೆದಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






