ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಲೋಕಾಯುಕ್ತ ಬಿಗ್ ಶಾಕ್: 7 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯಾದ್ಯಂತ ಇಂದುಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳು ಹಾಗೂ ಅವರ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಈ ಹಿಂದೆ ಕೂಡ ಕರ್ನಾಟಕದ ಅನೇಕ ಕಡೆಗಳಲ್ಲಿ ದಾಳಿ ನಡೆಸಿದ್ದರು. ಇದೀಗ ಏಕಕಾಲಕ್ಕೆ ಬೆಂಗಳೂರು, ಕೋಲಾರ, ಕಲಬುರಗಿ, ದಾವಣಗೆರೆ, ತುಮಕೂರು, ಬಾಗಲಕೋಟೆ ಹಾಗೂ ವಿಜಯಪುರದಲ್ಲಿ ಲೋಕಾಯುಕ್ತ ದಾಳಿ ನಡೆದಿದೆ.
8 ಮಂದಿ ಅಧಿಕಾರಿಗಳ ನಿವಾಸ, ಕಚೇರಿಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನ DPAR ಚೀಫ್ ಇಂಜಿನಿಯರ್ ಟಿ.ಡಿ.ನಂಜುಡಪ್ಪ, ಬಿಬಿಎಂಪಿಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಹೆಚ್.ಬಿ.ಕಲ್ಲೇಶಪ್ಪ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.
ಕೋಲಾರದಲ್ಲಿರುವ ಬೆಸ್ಕಾಂ ಎಇಇ ಜಿ.ನಾಗರಾಜ್, ಕಲಬುರಗಿ ಲೋಕೋಪಯೋಗಿ ಚೀಫ್ ಇಂಜಿನಿಯರ್ ಜಗನ್ನಾಥ್, ದಾವಣಗೆರೆ ಫುಡ್ ಸೇಫ್ಟಿ ಅಧಿಕಾರಿ ಜಿ.ಎಸ್.ನಾಗರಾಜು, ಬಾಗಲಕೋಟೆ ಪಂಚಾಯತ್ ರಾಜ್ ಇಲಾಖೆ ಅಕೌಂಟೆಂಟ್ ಮಲ್ಲೇಶ್, ತುಮಕೂರು ಜಿಲ್ಲೆ ಶಿರಾ ತಾಲೂಕಿನ ತಾವರೆಕೆರೆ ಪಿಹೆಚ್ಸಿ ವೈದ್ಯ ಜಗದೀಶ್ ಅವರ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದೆ.
ನಿಮ್ಮ ಪ್ರತಿಕ್ರಿಯೆ ಏನು?






