ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಲೋಕಾಯುಕ್ತ ಬಿಗ್ ಶಾಕ್.! ರಾಜ್ಯದ ಹಲವೆಡೆ ದಾಳಿ

ಜನವರಿ 31, 2025 - 10:54
 0  10
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಲೋಕಾಯುಕ್ತ ಬಿಗ್ ಶಾಕ್.! ರಾಜ್ಯದ ಹಲವೆಡೆ ದಾಳಿ

ಬೆಂಗಳೂರುಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆಬೆಂಗಳೂರು, ರಾಯಚೂರು, ಬೆಳಗಾವಿ, ಬಾಗಲಕೋಟೆ ಸೇರಿದಂತೆ ಕರ್ನಾಟಕದ ಹಲವೆಡೆ ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಳೆಗಳ ಪರಿಶೀಲನೆ ಆರಂಭಿಸಿದ್ದಾರೆ. ಇದರೊಂದಿಗೆ ಲೋಕಾಯುಕ್ತ ಅಧಿಕಾರಿಗಳಿಂದ ಭ್ರಷ್ಟರ ಬೇಟೆ ಮುಂದುವರಿದಿದೆ

ಬೆಂಗಳೂರಿನಲ್ಲಿ ಕೂಡ ಬಿಬಿಎಂಪಿ ಎಇಇ ಮಾಧವ ರಾವ್ ಮನೆ ಮೇಲೆ ದಾಳಿ ನಡೆದಿದೆ. ಎಂಜಿನಿಯರಿಂಗ್ ವಿಭಾಗದ ಎಇಇ ಮಾಧವರಾವ್ ಮನೆಗೆ ತಲುಪಿರುವ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾ ದಾಳಿ ನಡೆದಿದೆ. ಬೆಳಗಾವಿ ನಗರದ ಅನಗೋಳದಲ್ಲಿರುವ, ಬೆಳಗಾವಿ ಪ್ರಭಾರಿ ಸಬ್ ರಿಜಿಸ್ಟರ್ ಸಚಿನ್ ಮಂಡೇದ್ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಮನೆ, ಕಚೇರಿ ಸೇರಿ 3 ಕಡೆಗಳಲ್ಲಿ ದಾಳಿ ನಡೆಸಲಾಗಿದೆ.

ಹಾರೂಗೇರಿ ವೆಟರ್ನರಿ ಇನ್ಸ್​​ಪೆಕ್ಟರ್​​ ಸಂಜಯ್ ಮನೆ ಮೇಲೂ ದಾಳಿ ನಡೆದಿದೆ. ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ನಿವಾಸದ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು, ಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow