ಭದ್ರಾವತಿಯಲ್ಲಿ ಶಾಸಕ ಹೆಸರಿಗಷ್ಟೇ ಮಗನದ್ದೇ ದರ್ಬಾರ್: ಮಹಿಳಾ ಅಧಿಕಾರಿಗೆ ಸೊಂಟದ ಕೆಳಗಿನ ಪದ ಬಳಸಿ ನಿಂದನೆ!

ಭದ್ರಾವತಿ ಕಾಂಗ್ರೆಸ್ ಶಾಸಕ ಸಂಗಮೇಶ್ ಅವರ ಪುತ್ರ ಬಿ.ಎಸ್. ಬಸವೇಶನ ವಿರುದ್ಧ ಆರೋಪವೊಂದು ಕೇಳಿಬಂದಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಯನ್ನು ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಅವರ ಪುತ್ರ ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಶಿವಮೊಗ್ಗದಲ್ಲಿ ಅಕ್ರಮ ಮರಳುಗಾರಿಕೆ ತಡೆಯಲು ದಾಳಿ ನಡೆಸಿದ ವೇಳೆ ನಡೆದಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಪುತ್ರನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.
ಭದ್ರಾವತಿ ಭದ್ರಾ ನದಿತಟದಲ್ಲಿ ನಡೆಯುತ್ತಿದ್ದ ಅಕ್ರಮ ಮರುಳು ಗಣಿಗಾರಿಕೆ ಮೇಲೆ ಗಣಿ ಇಲಾಖೆಯ ಮಹಿಳಾ ವಿಜ್ಞಾನಿ ಸೋಮವಾರ ಮಧ್ಯರಾತ್ರಿ ದಾಳಿ ಮಾಡಿದ್ದರು. ಈ ವೇಳೆ ಶಾಸಕ ಬಿಕೆ ಸಂಗಮೇಶ್ ಪುತ್ರ ಮಹಿಳಾ ಅಧಿಕಾರಿಗೆ ದೂರವಾಣಿ ಕರೆಯಲ್ಲಿ ಬೇ*****ಮು****, ನಿಮ್ಮ***** ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಮಹಿಳಾ ಅಧಿಕಾರಿಗೆ ಅಶ್ಲೀಲವಾಗಿ ಬೈದಿರುವ ವಿಡಿಯೋ ವೈರಲ್ ಆಗಿದೆ.
ಮಹಿಳಾ ಅಧಿಕಾರಿಗೆ ನಿಂದಿಸಿದ ಶಾಸಕ ಸಂಗಮೇಶ್ ಪುತ್ರನ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದೆ. ಶಾಸಕ ಸಂಗಮೇಶ್ ಪುತ್ರನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.
ನಿಮ್ಮ ಪ್ರತಿಕ್ರಿಯೆ ಏನು?






