ಭಾರತ-ನ್ಯೂಜಿಲೆಂಡ್ ಟೆಸ್ಟ್ ಮ್ಯಾಚ್: ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಇಂದಿನಿಂದ 5 ದಿನ ಸಂಚಾರ ಮಾರ್ಪಾಡು!

ಅಕ್ಟೋಬರ್ 16, 2024 - 09:11
 0  23
ಭಾರತ-ನ್ಯೂಜಿಲೆಂಡ್ ಟೆಸ್ಟ್ ಮ್ಯಾಚ್: ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಇಂದಿನಿಂದ 5 ದಿನ ಸಂಚಾರ ಮಾರ್ಪಾಡು!

ಬೆಂಗಳೂರು:- ವಾಹನ ಸವಾರರೇ ಇದು ನೀವು ಗಮನದಲ್ಲಿಟ್ಟುಕೊಂಡು ಓದಬೇಕಾದ ಸ್ಟೋರಿ. ಇಂದಿನಿಂದ ಬರೋಬ್ಬರಿ ಐದು ಬೆಂಗಳೂರಿನ ಈ ಏರಿಯಾದಲ್ಲಿ ಸಂಚಾರ ಮಾರ್ಪಾಡು ಮಾಡಲಾಗಿದೆ. ಹೀಗಾಗಿ ವಾಹನ ಸವಾರರು ಸಹಕರಿಸುವಂತೆ ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ. ಎಸ್, ಭಾರತ-ನ್ಯೂಜಿಲೆಂಡ್ ಟೆಸ್ಟ್​ ಪಂದ್ಯ ಇಂದಿನಿಂದ ನಡೆಯುತ್ತಿದ್ದು, ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಸಂಚಾರ ಮಾರ್ಪಾಡು ಮಾಡಲಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರದಿಂದ ಅಂದ್ರೆ ಇಂದಿನಿಂದ ಭಾನುವಾರದವರೆಗೆ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಅಂತರಾಷ್ಟ್ರೀಯ ಕ್ರಿಕೆಟ್ ಟೆಸ್ಟ್ ಪಂದ್ಯಾವಳಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಸುತ್ತ ಬೆಳಿಗ್ಗೆ 7:00 ಗಂಟೆಯಿಂದ ಸಂಜೆ 06:00 ಗಂಟೆಯವರೆಗೆ ಐದೂ ದಿನವು ವಾಹನ ಸಂಚಾರ ವ್ಯವಸ್ಥೆಯಲ್ಲಿ ಮಾರ್ಪಾಡು ಮಾಡಲಾಗಿದೆ.

ವಾಹನಗಳ ನಿಲುಗಡೆ ನಿಷೇಧ

ಕ್ಲೀನ್ಸ್ ರಸ್ತೆ, ಎಂ.ಜಿ ರಸ್ತೆ, ಎಂ.ಜಿ ರಸ್ತೆ ಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.

ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್‌ರಸ್ತೆ. ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸುವಂತಿಲ್ಲ.

ಕಸ್ತೂರ್ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ ವಾಹನ ನಿಲುಗಡೆ ನಿಷೇಧ ಮಾಡಲಾಗಿದೆ.

ವಿಶ್ವಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ ಮತ್ತು ನೃಪತುಂಗ ರಸ್ತೆಯಲ್ಲಿ ವಾಹನ ನಿಲುಗಡೆ ಮಾಡುವಂತಿಲ್ಲ.

 

ವಾಹನಗಳ ನಿಲುಗಡೆ ಸ್ಥಳಗಳು

ಯು.ಬಿ ಸಿಟಿ ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಬಹುದು.

ಬಿ.ಎಂ.ಟಿ.ಸಿ ಬಸ್ ನಿಲ್ದಾಣದ ಮೊದಲನೆ ಮಹಡಿಯಲ್ಲಿ ವಾಹನ ನಿಲುಗಡೆಗೆ ಅವಕಾಶವಿದೆ.

ಕಿಂಗ್ಸ್ ರಸ್ತೆ, (ಕಬ್ಬನ್‌ ಪಾರ್ಕ್ ಒಳಭಾಗ) ವಾಹನ ನಿಲ್ಲಿಸಬಹುದು.

ಕಬ್ಬನ್ ರಸ್ತೆಯಲ್ಲಿ: ಬಿ.ಆರ್.ವಿ ಜಂಕ್ಷನ್ ನಿಂದ ಸಿ.ಟಿ.ಓ ಸರ್ಕಲ್​ವರೆಗೆ ಕ್ಯಾಬ್/ಆಟೋರಿಕ್ಷಾಗಳು ಪ್ರಯಾಣಿಕರನ್ನು ಇಳಿಸುವ ಮತ್ತು ಹತ್ತಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow