ಭಾರತ ವಿರುದ್ಧದ 2nd ಟೆಸ್ಟ್ ಮ್ಯಾಚ್ ಗೆ ನ್ಯೂಝಿಲೆಂಡ್ ತಂಡದ ಸ್ಟಾರ್ ಆಟಗಾರ ಔಟ್!

ನ್ಯೂಝಿಲೆಂಡ್ ತಂಡಕ್ಕೆ ಬಿಗ್ ಶಾಕ್ ಎದುರಾಗಿದ್ದು, 2ನೇ ಪಂದ್ಯದಿಂದ ಸ್ಟಾರ್ ಆಟಗಾರ ಔಟ್ ಆಗಿದ್ದಾರೆ ಎಂಬ ವರದಿ ಬಹಿರಂಗವಾಗಿದೆ.
ತೊಡೆಸಂದು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಕೇನ್ ವಿಲಿಯಮ್ಸನ್ ಅಲಭ್ಯರಾಗಲಿದ್ದಾರೆ
ಭಾರತ ಮತ್ತು ನ್ಯೂಝಿಲೆಂಡ್ ನಡುವಣ ದ್ವಿತೀಯ ಟೆಸ್ಟ್ ಪಂದ್ಯವು ಅಕ್ಟೋಬರ್ 24 ರಿಂದ ಶುರುವಾಗಲಿದೆ. ಈ ಪಂದ್ಯವು ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯಲಿದೆ. ಇದೀಗ ಈ ಪಂದ್ಯಕ್ಕೆ ವಿಲಿಯಮ್ಸನ್ ಅಲಭ್ಯರಾಗಿರುವ ಕಾರಣ ವಿಲ್ ಯಂಗ್ ತಂಡದಲ್ಲೇ ಮುಂದುವರೆಯಲಿದ್ದಾರೆ.
ಪುಣೆಯಲ್ಲಿ ನಡೆಯಲಿರುವ ದ್ವಿತೀಯ ಟೆಸ್ಟ್ ಪಂದ್ಯವು ಭಾರತ ತಂಡದ ಪಾಲಿಗೆ ನಿರ್ಣಾಯಕ. ಏಕೆಂದರೆ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್ನಲ್ಲಿ ನ್ಯೂಝಿಲೆಂಡ್ ತಂಡ 8 ವಿಕೆಟ್ಗಳ ಜಯ ಸಾಧಿಸಿದೆ. ಇದೀಗ ದ್ವಿತೀಯ ಟೆಸ್ಟ್ ಪಂದ್ಯ ಗೆದ್ದರೆ ಸರಣಿ ವಶಪಡಿಸಿಕೊಳ್ಳಬಹುದು.
ಅತ್ತ ಸರಣಿ ಆಸೆಯನ್ನು ಜೀವಂತವಿರಿಸಿಕೊಳ್ಳಬೇಕಿದ್ದರೆ ಟೀಮ್ ಇಂಡಿಯಾ ದ್ವಿತೀಯ ಟೆಸ್ಟ್ ಪಂದ್ಯವನ್ನು ಗೆಲ್ಲಲೇಬೇಕು. ಅಥವಾ ಸರಣಿ ಸೋಲನ್ನು ತಪ್ಪಿಸಿಕೊಳ್ಳಬೇಕಿದ್ದರೆ 2ನೇ ಪಂದ್ಯದಲ್ಲಿ ಕನಿಷ್ಠ ಡ್ರಾ ಸಾಧಿಸಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಒಂದಾರ್ಥದಲ್ಲಿ ಟೀಮ್ ಇಂಡಿಯಾ ಪಾಲಿಗೆ ಪುಣೆ ಟೆಸ್ಟ್ ಮಾಡು ಇಲ್ಲವೇ ಮಡಿ ಪಂದ್ಯ ಎನ್ನಬಹುದು.
ನಿಮ್ಮ ಪ್ರತಿಕ್ರಿಯೆ ಏನು?






