ಭಾರತ ಪ್ರವಾಸಕ್ಕೆ ದಕ್ಷಿಣ ಆಫ್ರಿಕಾ ಟೆಸ್ಟ್ ತಂಡವನ್ನು ಪ್ರಕಟಿಸಲಾಗಿದೆ.
ಭಾರತದಲ್ಲಿ ನಡೆಯಲಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ 15 ಸದಸ್ಯರ ತಂಡವನ್ನು ಘೋಷಿಸಲಾಗಿದೆ.
ಟೀಂ ಇಂಡಿಯಾ ಇತ್ತೀಚೆಗೆ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದ್ದರೆ, ಆಸ್ಟ್ರೇಲಿಯಾ ಪ್ರವಾಸದಲ್ಲಿ ಏಕದಿನ ಸರಣಿಯಲ್ಲಿ ಸೋಲು ಕಂಡಿತ್ತು. ಈಗ ಟಿ20 ಸರಣಿಯ ಬಳಿಕ ಭಾರತ ದಕ್ಷಿಣ ಆಫ್ರಿಕಾವನ್ನು ಆತಿಥ್ಯ ವಹಿಸಲಿದೆ.
ಇದೀಗ ಪ್ರಕಟವಾದ ದಕ್ಷಿಣ ಆಫ್ರಿಕಾ ತಂಡಕ್ಕೆ ನಾಯಕತ್ವವನ್ನು ಟೆಂಬಾ ಬವುಮಾ ವಹಿಸಿಕೊಂಡಿದ್ದಾರೆ. ಇಂಜುರಿಯಿಂದ ಚೇತರಿಸಿಕೊಂಡಿರುವ ಬವುಮಾ, ಪಾಕಿಸ್ತಾನ ವಿರುದ್ಧದ ಸರಣಿಯಲ್ಲಿ ಆಡಿರಲಿಲ್ಲ. ಅವರ ಅನುಪಸ್ಥಿತಿಯಲ್ಲಿ ಐಡೆನ್ ಮಾರ್ಕ್ರಾಮ್ ತಂಡವನ್ನು ಮುನ್ನಡೆಸಿದ್ದರು.
ಈ ಬಾರಿ ಬವುಮಾ ಸಂಪೂರ್ಣ ಫಿಟ್ ಆಗಿ ಮರಳಿ ಬಂದಿದ್ದು, ಭಾರತದಲ್ಲಿ ತಂಡವನ್ನು ಮುನ್ನಡೆಸಲು ಸಿದ್ಧರಾಗಿದ್ದಾರೆ.
ದಕ್ಷಿಣ ಆಫ್ರಿಕಾ ತಂಡ:
ಟೆಂಬಾ ಬವುಮಾ (ನಾಯಕ), ಏಡೆನ್ ಮಾರ್ಕ್ರಾಮ್, ರಿಯಾನ್ ರಿಕೆಲ್ಟನ್, ಟ್ರಿಸ್ಟಾನ್ ಸ್ಟಬ್ಸ್, ಕೈಲ್ ವೆರ್ರೆನ್, ಡೆವಾಲ್ಡ್ ಬ್ರೆವಿಸ್, ಜುಬೈರ್ ಹಮ್ಜಾ, ಟೋನಿ ಡಿ ಜೊರ್ಜಿ, ಕಾರ್ಬಿನ್ ಬಾಷ್, ವಿಯಾನ್ ಮುಲ್ಡರ್, ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ಸೆನುರಾನ್ ಮುತ್ತುಸಾಮಿ, ಸೈಮನ್ ಹಾರ್ಮರ್, ಕಗಿಸೊ ರಬಾಡಾ.