ಭಾರತದ ಪ್ರಮುಖ ಚೆಕ್ ಪೋಸ್ಟ್ ಮೇಲೆ ದಾಳಿ ಮಾಡಿರುವುದಾಗಿ ಪಾಕ್ ಸುಳ್ಳು ಹೇಳಿದೆ: ವ್ಯೋಮಿಕಾ ಸಿಂಗ್

ನವದೆಹಲಿ: ಭಾರತದ ಪ್ರಮುಖ ಚೆಕ್ ಪೋಸ್ಟ್ ಮೇಲೆ ದಾಳಿ ಮಾಡಿರುವುದಾಗಿ ಪಾಕ್ ಸುಳ್ಳು ಹೇಳಿದೆ ಎಂದು ವಾಯುಪಡೆ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಹೇಳಿದರು. ವಿದೇಶಾಂಗ ಸಚಿವಾಲಯ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದ ಅವರು,
ಪಾಕ್ ಸೇನೆಯು ತನ್ನ ಸೈನ್ಯವನ್ನು ಗಡಿ ಪ್ರದೇಶಗಳತ್ತ ಸ್ಥಳಾಂತರಿಸುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಇದಕ್ಕೆ ಪ್ರತ್ಯುತ್ತರ ನೀಡಲು ಭಾರತೀಯ ಸಶಸ್ತ್ರ ಪಡೆಗಳು ಸಂಪೂರ್ಣವಾಗಿ ಸಿದ್ಧವಾಗಿವೆ. ಅಲ್ಲದೆ, ಪಾಕಿಸ್ತಾನವು ಭಾರತದ ಪ್ರಮುಖ ಚೆಕ್ ಪೋಸ್ಟ್ ಮೇಲೆ ದಾಳಿ ಮಾಡಿರುವುದಾಗಿ ಸುಳ್ಳು ಹೇಳಿದೆ ಎಂದರು.
ಇದೇ ವೇಳೆ ಮಾತನಾಡಿದ ಸೇನೆಯ ಕರ್ನಲ್ ಸೋಫಿಯಾ ಖುರೇಷಿ, ಪಾಕಿಸ್ತಾನ ಸೇನೆಯು ಗಡಿ ಪ್ರದೇಶಗಳಿಗೆ ತನ್ನ ಸೈನಿಕರನ್ನು ನಿಯೋಜಿಸುತ್ತಿರುವುದನ್ನು ಗಮನಿಸುತ್ತಿದ್ದೇವೆ.
ಪಾಕಿಸ್ತಾನದ ಸೇನಾ ಪಡೆಗಳು ಇಡೀ ಪಶ್ಚಿಮ ಭಾಗದಲ್ಲಿ ಆಕ್ರಮಣಕಾರಿ ಪ್ರವೃತ್ತಿಯನ್ನು ಮುಂದುವರೆಸಿವೆ. ಭಾರತೀಯ ಸೇನೆ ಚೆಕ್ ಪೋಸ್ಟ್ಗಳನ್ನು ಗುರಿಯಾಗಿಸಿಕೊಂಡು ಯುಸಿಎಪಿ ಡ್ರೋನ್‌ಗಳು, ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಫೈಟರ್ ಜೆಟ್‌ಗಳನ್ನು ಬಳಸಿ ದಾಳಿ ನಡೆಸಲಾಗುತ್ತಿದೆ ಎಂದು ಹೇಳಿದರು.
ನಿಮ್ಮ ಪ್ರತಿಕ್ರಿಯೆ ಏನು?






