ಭಾರೀ ಮಳೆ ಹಿನ್ನಲೆ: ನಾಳೆ ಬೆಂಗಳೂರಿನ ಎಲ್ಲಾ ಶಾಲಾಗಳಿಗೆ ರಜೆ ಘೋಷಿಸಿಸಿ DC ಆದೇಶ

ಅಕ್ಟೋಬರ್ 22, 2024 - 20:17
 0  13
ಭಾರೀ ಮಳೆ ಹಿನ್ನಲೆ: ನಾಳೆ ಬೆಂಗಳೂರಿನ ಎಲ್ಲಾ ಶಾಲಾಗಳಿಗೆ ರಜೆ ಘೋಷಿಸಿಸಿ DC ಆದೇಶ

ಬೆಂಗಳೂರಿನಲ್ಲಿ ಕಳೆದ ರಾತ್ರಿಯಿಂದಲೂ ಭರ್ಜರಿ ಮಳೆಯಾಗುತ್ತಿದೆ. ಬಿಟ್ಟುಬಿಡದೆ ವರುಣನ ಆರ್ಭಟ ನಗರದಾದ್ಯಂತ ಮುಂದುವರೆದಿದೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಇಂದು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿತ್ತು.

ಹಿನ್ನೆಲೆ ನಾಳೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ನಗರದಲ್ಲಿ ಭಾರೀ ಅವಾಂತರಗಳು ಸೃಷ್ಟಿಯಾಗಿದ್ದು, ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿವೆ. ಮಳೆ ಅಬ್ಬರದ ಹಿನ್ನೆಲೆ ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ ರಜೆ ಘೋಷಿಸಿದ್ದು,

ಅಂಗನವಾಡಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆ ಮೇರೆಗೆ ನಾಳೆ ಒಂದು ದಿನ ರಜೆ ಘೋಷಣೆ ಮಾಡಲಾಗಿದ್ದು, ಪ್ರಾಥಮಿಕ, ಪ್ರೌಢಶಾಲಾ ಬಿಟ್ಟು ಉಳಿದ ತರಗತಿಗಳು ಎಂದಿನಂತೆ ನಡೆಯಲಿವೆ ಹಾಗೂ ಪದವಿ, ಸ್ನಾತಕೋತ್ತರ ಪದವಿ, ಐಐಟಿ, ಎಂಜಿನಿಯರಿಂಗ್ ಕಾಲೇಜುಗಳಿಗೆ ರಜೆ ಇಲ್ಲ ಎಂದು ತಿಳಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow