ಭೀಕರ ಅಪಘಾತ: ಟ್ರ್ಯಾಕ್ಟರ್ ಟ್ರಾಲಿಗೆ ಡಿಕ್ಕಿ, 8 ಯಾತ್ರಿಕರು ಸಾವು - 43 ಮಂದಿಗೆ ಗಾಯ

ಆಗಸ್ಟ್ 25, 2025 - 12:18
ಆಗಸ್ಟ್ 25, 2025 - 12:24
 0  21
ಭೀಕರ ಅಪಘಾತ: ಟ್ರ್ಯಾಕ್ಟರ್ ಟ್ರಾಲಿಗೆ ಡಿಕ್ಕಿ, 8 ಯಾತ್ರಿಕರು ಸಾವು - 43 ಮಂದಿಗೆ ಗಾಯ

ಲಕ್ನೋ:- ಉತ್ತರ ಪ್ರದೇಶದ ಲಂದ್‌ಶಹರ್  ಜಿಲ್ಲೆಯಲ್ಲಿ ಟ್ರ್ಯಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಯಾತ್ರಿಕರು ಸಾವನ್ನಪ್ಪಿದ್ದು, 43 ಮಂದಿ ಗಾಯಗೊಂಡಿರುವ ಘಟನೆ ಜರುಗಿದೆ. 

ಅರ್ನಿಯಾ ಬೈಪಾಸ್ ಬಳಿಯ ಬುಲಂದ್‌ಶಹರ್-ಅಲಿಗಢ ಗಡಿಯಲ್ಲಿ ಸೋಮವಾರ ನಸುಕಿನ ಜಾವ 2:10ರ ಸುಮಾರಿಗೆ ಅಪಘಾತ ಸಂಭವಿಸಿದೆ. ಮೃತರಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ. ಗಾಯಗೊಂಡಿರುವ ಯಾತ್ರಿಕರ ಪೈಕಿ 12 ಮಂದಿ ಅಪ್ರಾಪ್ತರಾಗಿದ್ದಾರೆ. ಕ್ಯಾಂಟರ್ ಟ್ರಕ್ ಹಿಂದಿನಿಂದ ಟ್ರ‍್ಯಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದ ಪರಿಣಾಮ ಅದು ಪಲ್ಟಿಯಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ಮಾಡಿದ್ದಾರೆ.

ಮೃತರನ್ನು ಟ್ರ‍್ಯಾಕ್ಟರ್ ಚಾಲಕ ಇ.ಯು. ಬಾಬು (40), ರಾಂಬೆಟಿ (65), ಚಾಂದನಿ (12), ಘನಿರಾಮ್ (40), ಮೋಕ್ಷಿ (40), ಶಿವಾಂಶ್ (6), ಯೋಗೇಶ್ (50) ಮತ್ತು ವಿನೋದ್ (45) ಎಂದು ಗುರುತಿಸಲಾಗಿದ್ದು, ಎಲ್ಲರೂ ಕಾಸ್ಗಂಜ್ ಜಿಲ್ಲೆಯ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಶ್ರುತಿ, ಎಸ್‌ಎಸ್‌ಪಿ ಸಿಂಗ್ ಮತ್ತು ಇತರ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow