ಭೀಕರ ರಸ್ತೆ ಅಪಘಾತ: ಧರ್ಮಸ್ಥಳ ಪಾದಯಾತ್ರಿಗಳ ಮೇಲೆ ಹರಿದ ಬಸ್, ಇಬ್ಬರು ಸಾವು!

ಹಾಸನ:- ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಬಳಿ ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ಹೋಗುತ್ತಿದ್ದವರ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜರುಗಿದೆ.
ಮೃತರನ್ನು ಸುರೇಶ್ (60), ಕುಮಾರ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ದಿನೇಶ್ ಎಂಬುವರನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ಹೋಗುತ್ತಿದ್ದರು. ದಾರಿ ಮಧ್ಯೆ ಖಾಸಗಿ ಬಸ್ ಪಾದಾಯಾತ್ರಿಗಳ ಮೇಲೆ ಹರಿದಿದೆ. ಶಾಂತಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಪೊಲೀಸರಿಂದ ತನಿಖೆ ಮುಂದುವರಿದಿದೆ.
ನಿಮ್ಮ ಪ್ರತಿಕ್ರಿಯೆ ಏನು?






