ಭೀಮಾತೀರದಲ್ಲಿ ಮತ್ತೆ ಗುಂಡಿನ ಮೊರೆತ: ಗ್ರಾಮ ಪಂಚಾಯಿತಿ ಅಧ್ಯಕ್ಷನ ಹತ್ಯೆ!

ಸೆಪ್ಟೆಂಬರ್ 3, 2025 - 12:03
 0  25
ಭೀಮಾತೀರದಲ್ಲಿ ಮತ್ತೆ ಗುಂಡಿನ ಮೊರೆತ: ಗ್ರಾಮ ಪಂಚಾಯಿತಿ ಅಧ್ಯಕ್ಷನ ಹತ್ಯೆ!

ವಿಜಯಪುರ: ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿ ಬಂದಿದೆ. ವಿಜಯಪುರದ ಚಡಚಣ ತಾಲೂಕಿನ ದೇವರನಿಂಬರಗಿಯಲ್ಲಿ ಗ್ರಾಪಂ ಅಧ್ಯಕ್ಷನ ಹತ್ಯೆ ಘಟನೆ ನಡೆದಿದೆ. ಗ್ರಾಪಂ ಅಧ್ಯಕ್ಷ ಭೀಮನಗೌಡ ಬಿರಾದಾರ ಎಂಬುವವರನ್ನು ಹತ್ಯೆ ಮಾಡಲಾಗಿದೆ.

ಮೃತ ಭೀಮನಗೌಡ ಅವರು ದೇವರ ನಿಂಬರಗಿ ಗ್ರಾಮದ ಕಟಿಂಗ್ ಶಾಪ್‌ಗೆ ಆಗಮಿಸಿದ್ದರು. ಈ ವೇಳೆ ಮೂರರಿಂದ ನಾಲ್ಕು ಜನ ಮುಸುಕುಧಾರಿಗಳು ಬಂದು ಕಟಿಂಗ್ ಮಾಡುವವರ ಕಣ್ಣಿಗೆ ಖಾರದ ಪುಡಿ ಎರಚಿದ್ದಾರೆ. ಬಳಿಕ ಭೀಮನಗೌಡ ಅವರ ಮೇಲೆ ಫೈರಿಂಗ್ ನಡೆಸಿ, ತಲವಾರ್‌ನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. 

ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ, ಗುಂಡು ಹಾರಿಸಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಚಡಚಣ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸುರೇಶ್ ಬೆಂಡೆಗುಂಬಳ್ ಹಾಗೂ ಇನ್ನಿತರ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಚಡಚಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ಇದರಿಂದ ದೇವರನಿಂಬರಗಿ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow