ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್: ರಾಜ್ಯದ ಹಲವೆಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ

ಮೇ 31, 2025 - 10:39
 0  17
ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್: ರಾಜ್ಯದ ಹಲವೆಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ

ಬೆಂಗಳೂರು: ಬೆಳ್ಳಂ ಬೆಳಗ್ಗೆ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಶಾಕ್ ಕೊಟ್ಟಿದ್ದಾರೆ. ಹೌದು, ರಾಜ್ಯಾದ್ಯಂತ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆಕಲಬುರಗಿ, ಧಾರವಾಡ, ಬಾಗಲಕೋಟೆ, ಗದಗದ ಹುನಗುಂದ, ಹಾವೇರಿ ಸೇರಿದಂತೆ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು,

 ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ದಾಳಿ ಮಾಡಿದದು, ಆಸ್ತಿ-ಪಾಸ್ತಿ ಬಗ್ಗೆ ದಾಖಲೆ ಪರಿಶೀಲಿಸಿಸುತ್ತಿದ್ದಾರೆ.  ಗದಗ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಗಂಗಾಧರ್ ಶಿರೋಳ ಮನೆ, ಕಚೇರಿ ಸೇರಿ 6 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಗಂಗಾಧರ್ ಮನೆ, ಕಚೇರಿ, ಅಳಿಯ, ಭಾವನ ಮನೆ ಸೇರಿ 6 ಕಡೆ ಲೋಕಾಯುಕ್ತ ಎಸ್ ಪಿ ಹಣಮಂತರಾಯ ನೇತೃತ್ವದಲ್ಲಿ ದಾಳಿ ನಡೆದಿದ್ದು, ದಾಖಗಳ ಶೋಧ ನಡೆದಿದೆ. ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ, ಹಾವೇರಿ ಜಿಲ್ಲೆಯಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು. ಪರಿಶೀಲನೆ ನಡೆಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow