ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್: ರೇಣುಕಾಚಾರ್ಯ

ಬೆಂಗಳೂರು: ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಎಂದುಮಾಜಿ ಸಚಿವ ರೇಣುಕಾಚಾರ್ಯ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಸಿಎಂ ಆದ್ಮೇಲೆ ದ್ವೇಷದ ರಾಜಕೀಯ ಮಾಡ್ತಿದ್ದಾರೆ. ಅಧಿಕಾರಕ್ಕೆ ಬಂದು ಎರಡು ವರ್ಷ ಆಗಿದೆ. ತಮ್ಮ ಮೇಲೆ ವಾಲ್ಮೀಕಿ, ಮುಡಾ, ವಕ್ಫ್ ವಿವಾದ ಇದೆ.
ಅಲ್ಪಸಂಖ್ಯಾತರ ಗುತ್ತಿಗೆದಾರಿಗೆ ಶೇ.4 ಮೀಸಲಾತಿ ನೀಡುವ ವಿವಾದ ಇದೆ. ಯಾವಾಗ ಮುಡಾ ತನಿಖೆ ಗಂಭೀರವಾಗಲು ಪ್ರಾರಂಭ ಆಯ್ತೋ ಆಗ ಕೋವಿಡ್ ವಿಚಾರದಲ್ಲಿ ಯಡಿಯೂರಪ್ಪ ಮೇಲೆ ಎಸ್ಐಟಿ ರಚನೆ ಮಾಡಿರುವುದಕ್ಕೆ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಿದ್ದಾರೆ. ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಎಂದು ಕಿಡಿಕಾರಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






