ಮಂಡ್ಯ: ಹಳೆಯ ದ್ವೇಷ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಭೀಕರ ಹತ್ಯೆ

ಆಗಸ್ಟ್ 9, 2025 - 11:59
 0  14
ಮಂಡ್ಯ: ಹಳೆಯ ದ್ವೇಷ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಭೀಕರ ಹತ್ಯೆ

ಮಂಡ್ಯ: ಹಳೆಯ ದ್ವೇಷ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಭೀಕರ ಹತ್ಯೆ

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಸಮೀಪ ಶುಕ್ರವಾರ ತಡರಾತ್ರಿ ಮಾರಕಾಸ್ತ್ರಗಳಿಂದ ವ್ಯಕ್ತಿಯೋರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಹತ್ಯೆಗೀಡಾದ ವ್ಯಕ್ತಿಯನ್ನು ಅರುಣ್ (30) ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ ಸುಮಾರು 9.30 ಗಂಟೆಗೆ ಅರುಣ್ ಹಾಗೂ ಆತನ ಸ್ನೇಹಿತರು ಎಂ.ಟಿ.ಆರ್ ಬಾರ್‌ನಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ವೇಳೆ ಹಳೆಯ ವಿಷಯಕ್ಕೆ ಸಂಬಂಧಿಸಿದಂತೆ ಪರಸ್ಪರ ಜಗಳ ಉಂಟಾಗಿದೆ. ಬಳಿಕ ಬಾರ್ ಸಿಬ್ಬಂದಿಗಳು ಎಲ್ಲರನ್ನು ಹೊರಗೆ ಕಳುಹಿಸಿದ್ದಾರೆ.

ನಂತರ, ಅರುಣ್ ತನ್ನ ಸ್ವಗ್ರಾಮ ವಡ್ಡರದೊಡ್ಡಿಗೆ ತೆರಳುತ್ತಿದ್ದಾಗ ಸೋಮನಹಳ್ಳಿ ಸಮೀಪದ ಸ್ಕಂದ ಲೇಔಟ್ ಬಳಿ ಎಂಟರಷ್ಟು ಮಂದಿ ಮಾರಕಾಸ್ತ್ರಗಳಿಂದ ಏಕಾಏಕಿ ದಾಳಿ ನಡೆಸಿದ್ದಾರೆ. ತೀವ್ರ ರಕ್ತಸ್ರಾವದಿಂದ ಅರುಣ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಘಟನೆಯ ಮಾಹಿತಿ ತಿಳಿದು ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಹಾಗೂ ಕೆಸ್ತೂರು ಪೊಲೀಸರು ಸ್ಥಳಕ್ಕೆ ಧಾವಿಸಿ, ಶವವನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow