ಮಗನ ಬರ್ತಡೇಗೆ ದರ್ಶನ್ ಹಾಜರ್: ಹೆಂಡ್ತಿ ಮನೆಯಲ್ಲಿ ಖುಷಿಯಲ್ಲಿ ದಾಸ!

ಅಕ್ಟೋಬರ್ 31, 2024 - 12:05
 0  13
ಮಗನ ಬರ್ತಡೇಗೆ ದರ್ಶನ್ ಹಾಜರ್: ಹೆಂಡ್ತಿ ಮನೆಯಲ್ಲಿ ಖುಷಿಯಲ್ಲಿ ದಾಸ!

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ದರ್ಶನ್ ಜೈಲಿಂದ ರಿಲೀಸ್ ಆಗಿದ್ದಾರೆ. ವಿಶೇಷ ಅಂದ್ರೆ ಇಂದು  ಮಗ ವಿನೀಶ್ ಜನ್ಮದಿನ. ಈ ವಿಶೇಷ ದಿನಕ್ಕೆ ಸರಿಯಾಗಿ ಅವರು ಮನೆಗೆ ಬಂದಿದ್ದಾರೆ.

ಬಳ್ಳಾರಿಯಿಂದ ಕಾರಿನಲ್ಲಿ ಪತ್ನಿ ಜೊತೆ ಹೊಸಕೆರೆಹಳ್ಳಿ ನಿವಾಸಕ್ಕೆ ದರ್ಶನ್ ಆಗಮಿಸಿದ್ದಾರೆ. ದರ್ಶನ್ ಅವರನ್ನು ನೋಡಲು ಫ್ಯಾನ್ಸ್ ನೆರೆದಿದ್ದರು. ಅವರಿಂದ ತಪ್ಪಿಸಿಕೊಂಡು ದರ್ಶನ್ ಮನೆ ಸೇರಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯಬಾರದು ಎನ್ನುವ ಕಾರಣಕ್ಕೆ ದರ್ಶನ್​ ಮನೆಗೆ ಪೊಲೀಸ್ ಬಿಗಿ ಭದ್ರತೆ ನೀಡಲಾಗಿದೆ

ಮಗ ವಿನೀಶ್​ಗೆ ಇಂದು ಜನ್ಮದಿನ. ಹೀಗಾಗಿ, ರಾತ್ರಿ ಕೇಕ್ ಕತ್ತರಿಸಿ ಸಂಭ್ರಮಿಸಲಾಗಿದೆ. ಮಗನ ಜೊತೆಯೇ ಅವರು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಆ ಬಳಿಕ ಊಟ ಮಾಡಿ ವಿಶ್ರಾಂತಿ ಪಡೆದಿದ್ದಾರೆ. ಹಲವು ತಿಂಗಳ ಬಳಿಕ ಬೆಡ್​ನಲ್ಲಿ ಅವರು ಹಾಯಾಗಿ ನಿದ್ರಿಸಿದ್ದಾರೆ. ಈ ದಿನಕ್ಕಾಗಿ ಅವರು ಕಳೆದ ನಾಲ್ಕೂವರೆ ತಿಂಗಳಿಂದ ಕಾಯುತ್ತಿದ್ದರು

ದರ್ಶನ್ ಅವರು ಜೈಲಿನಿಂದ ಹೊರ ಬಂದಿದ್ದು ವೈದ್ಯಕೀಯ ಚಿಕಿತ್ಸೆಗಾಗಿ. ಹೀಗಾಗಿ, ಅವರು ಆದಷ್ಟು ಬೇಗ ಆಸ್ಪತ್ರೆಗೆ ತೆರಳಬೇಕಿದೆ. ಇಂದು ಮಧ್ಯಾಹ್ನ ಅವರು ಆಸ್ಪತ್ರೆಗೆ ಶಿಫ್ಟ್ ಆಗೋ ಸಾಧ್ಯತೆ ಇದೆ. ಆ ಬಳಿಕ ಅವರು ವೈದ್ಯರ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಅವರು ಎಲ್ಲಿ ಬೇಕಿದ್ದರೂ ಚಿಕಿತ್ಸೆ ಪಡೆಯಲು ಅವಕಾಶ ಇದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow