ಮತ್ತೆ ಬಳ್ಳಾರಿ ಜೈಲಿಗೆ ಶಿಫ್ಟ್ ಆಗ್ತಾರಾ ದರ್ಶನ್..!? ಇಂದು ಕೋರ್ಟ್​ʼನಲ್ಲಿ ಭವಿಷ್ಯ ನಿರ್ಧಾರ

ಸೆಪ್ಟೆಂಬರ್ 2, 2025 - 11:07
 0  12
ಮತ್ತೆ ಬಳ್ಳಾರಿ ಜೈಲಿಗೆ ಶಿಫ್ಟ್ ಆಗ್ತಾರಾ ದರ್ಶನ್..!? ಇಂದು ಕೋರ್ಟ್​ʼನಲ್ಲಿ ಭವಿಷ್ಯ ನಿರ್ಧಾರ

ಬೆಂಗಳೂರು: ರೇಣುಕಾಸ್ವಾಮಿ ಹ*ತ್ಯೆ ಪ್ರಕರಣದಲ್ಲಿ ಅರೆಸ್ಟ್ ಆಗಿರೋ ದರ್ಶನ್ ಇಂದು ಬಳ್ಳಾರಿ ಕಾರಾಗೃಹಕ್ಕೆ ಶಿಫ್ಟ್​ ಆಗ್ತಾರಾ ಅನ್ನೋ ಭವಿಷ್ಯ ಇಂದು ನಿರ್ಧಾರವಾಗಲಿದೆ. ಇಂದು ದರ್ಶನ್ ಸೇರಿ ಐವರು ಆರೋಪಿಗಳ ಜೈಲು ಸ್ಥಳಾಂತರದ ಬಗ್ಗೆ ಆದೇಶ ನೀಡುವ ಸಾಧ್ಯತೆ ಇದೆ. 

ಭದ್ರತಾ ದೃಷ್ಟಿಯಿಂದ ಬೆಂಗಳೂರು ಜೈಲಿನಿಂದ ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಬೇಕೆಂದು ಸರ್ಕಾರಿ ಪರ ವಕೀಲರು ಮಾಡಿರೋ ಮನವಿ ಅರ್ಜಿ ವಿಚಾರಣೆ ನಡೆಸಲಿದೆ. ಈಗಾಗಲೇ ಇದಕ್ಕೆ ದರ್ಶನ್ ಪರ ವಕೀಲರು ಆಕ್ಷೇಪಣೆ ಸಲ್ಲಿಕೆ ಮಾಡಿದ್ದು, ಟ್ರಯಲ್ ಅತೀ ಶೀಘ್ರದಲ್ಲೇ ಪ್ರಾರಂಭ ಆಗ್ತಾ ಇದೆ.

ಹೀಗಾಗಿ, ಆರೋಪಿಯನ್ನು ಪದೇ ಪದೇ ಬಳ್ಳಾರಿಯಿಂದ ಕರೆತರಲು ಸಾಧ್ಯವಿಲ್ಲ. ಜೊತೆಗೆ ಆರೋಪಿ ತಾಯಿಗೆ ಕ್ಯಾನ್ಸರ್ ಮಾರಕ ಕಾಯಿಲೆ ಇದ್ದು, ಬಳ್ಳಾರಿಗೆ ಪ್ರಯಣ ಮಾಡಲು ಕಷ್ಟ. ಹೀಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಇರಿಸುವಂತೆ ಮನವಿ ಮಾಡಿದೆ. ಇಂದು ವಾದ ಮಂಡನೆ ಮಾಡಲಿರೋ ಸರ್ಕಾರಿ ಪರ ವಕೀಲರು ಯಾವ ಅಂಶವನ್ನು ಮುಂದಿಡಲಿದ್ದಾರೆ ಎಂಬುದನ್ನು ನೋಡಬೇಕು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow