ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ: ಪತಿಯಿಂದಲೇ ಪತ್ನಿಯ ಕತ್ತು ಸೀಳಿ ಭೀಕರ ಹತ್ಯೆ!

ಅಕ್ಟೋಬರ್ 22, 2025 - 12:02
 0  16
ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ: ಪತಿಯಿಂದಲೇ ಪತ್ನಿಯ ಕತ್ತು ಸೀಳಿ ಭೀಕರ ಹತ್ಯೆ!

ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಗಂಡನಿಂದ ಭೀಕರ ಕೃತ್ಯ ನಡೆದಿದ್ದು, ಹೆಂಡತಿಯ ಶೀಲ ಶಂಕಿಸಿ ಕತ್ತು ಸೀಳಿ ಭೀಕರ ಹತ್ಯೆ ಮಾಡಲಾಗಿದೆ. ಮಂಡ್ಯ ತಾಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಶ್ಬೇತಾ (36) ಕೊಲೆಯಾದ ಗೃಹಿಣಿಯಾಗಿದ್ದು, ಲೋಕೇಶ್ ಕೊಲೆ ಮಾಡಿದ ಗಂಡನಾಗಿದ್ದಾನೆ.

ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಮಂಗಳವಾರ ತಡರಾತ್ರಿ ದಂಪತಿಗಳ ನಡುವೆ ಜಗಳ ಉಂಟಾಗಿ ಲೋಕೇಶ್ ತನ್ನ ಪತ್ನಿ ಶ್ವೇತಾಳನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾನೆ.

ಘಟನೆ ಹಿನ್ನೆಲೆಯಲ್ಲಿ ಮಂಡ್ಯ ಗ್ರಾಮಾಂತರ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow