ಮತ್ತೋರ್ವ ಬಿಗ್ ಬಾಸ್ ಮಾಜಿ ಸ್ಪರ್ಧಿ ಅರೆಸ್ಟ್!? ರಕ್ಷಕ್ ಬುಲೆಟ್ ಮಾಡ್ಕೊಂಡ ಎಡವಟ್ಟೇನು?

ಇತ್ತೀಚೆಗೆ ಕೈಯಲ್ಲಿ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ಬಿಗ್ ಬಾಸ್ ಮಾಜಿ ಸ್ಪರ್ಧಿಗಳನ್ನು ಅರೆಸ್ಟ್ ಮಾಡಲಾಗಿದೆ. ಈ ಬೆನ್ನಲ್ಲೇ ಮತ್ತೋರ್ವ ಬಿಗ್ ಬಾಸ್ ಸ್ಪರ್ಧಿ ಶೀಘ್ರವೇ ಅರೆಸ್ಟ್ ಆಗಲಿದ್ದಾರೆ ಎಂದು ವರದಿಯಾಗಿದೆ.
ರಜತ್, ವಿನಯ್ ಗೌಡ ಜೈಲು ಸೇರಿರುವಾಗಲೇ ಮತ್ತೊಬ್ಬ ಬಿಗ್ ಬಾಸ್ ಸ್ಪರ್ಧಿಗೆ ಟೆನ್ಷನ್ ಶುರುವಾಗಿದೆ. ಹಿಂದೂ ಸಂಘಟನೆಗಳು ಇಂದು ರಕ್ಷಕ್ ಬುಲೆಟ್ ವಿರುದ್ಧ ದೂರು ನೀಡಲು ಸಜ್ಜಾಗಿವೆ. ಖಾಸಗಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ರಕ್ಷಕ್ ಅವಹೇಳನಕಾರಿಯಾಗಿ ಮಾತನಾಡಿದ್ದು ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ.
ಖಾಸಗಿ ಶೋನಲ್ಲಿ ರಕ್ಷಕ್ ಬುಲೆಟ್ ಅವರು ನಾಡದೇವಿ ಚಾಮುಂಡೇಶ್ವರಿಗೆ ಅವಹೇಳನ ಮಾಡಿರುವ ಆರೋಪಕ್ಕೆ ತುತ್ತಾಗಿದ್ದಾರೆ. ರಕ್ಷಕ್ ಆಡಿರೋ ಮಾತುಗಳನ್ನು ಖಂಡಿಸಿರುವ ಹಿಂದೂ ಸಂಘಟನೆಗಳು ದೂರು ಸಲ್ಲಿಸುತ್ತಿದ್ದಾರೆ.
ಭರ್ಜರಿ ಬ್ಯಾಚುಲರ್ಸ್ ವೇದಿಕೆಯಲ್ಲಿ ರಕ್ಷಕ್ ಬುಲೆಟ್ ಅವರು ದರ್ಶನ್ ಹಾಗೂ ರಚಿತಾ ರಾಮ್ ಅಭಿನಯದ ಬುಲ್ ಬುಲ್ ಸಿನಿಮಾದ ದೃಶ್ಯವನ್ನು ಕಾಪಿ ಮಾಡಲು ಹೋಗಿದ್ದಾರೆ. ಈ ವೇಳೆ ಪಕ್ಕದಲ್ಲಿದ್ದ ಹುಡುಗಿಯನ್ನು ಹೊಗಳುವ ಭರದಲ್ಲಿ ನಾಡದೇವಿ ಚಾಮುಂಡೇಶ್ವರಿಗೆ ಅವಮಾನ ಮಾಡಿದ್ದಾರೆ.
ಸ್ಟೇಜ್ ಮೇಲೆ ರಕ್ಷಕ್ ಬುಲೆಟ್ ಅವರು ನಿಮ್ಮನ್ನು ನೋಡ್ತಿದ್ರೆ ತಾಯಿ ಚಾಮುಂಡೇಶ್ವರಿ ಬೆಟ್ಟದಿಂದ ಇಳಿದು ಬಂದು ಸೀರೆ ಒಡವೆ ಬಿಚ್ಚಿಟ್ಟು ಪ್ಯಾಂಟು ಶರ್ಟು ಹಾಕೊಂಡು ಸ್ವಿಟ್ಜರ್ಲೆಂಡ್ನಲ್ಲಿ ಟ್ರಿಪ್ ಹೊಡಿತಿದ್ದಾಳೆ ಅನ್ನಿಸ್ತಿದೆ ಎಂದು ರಕ್ಷಕ್ ಬುಲೆಟ್ ಅವರು ಡೈಲಾಗ್ ಹೊಡೆದಿದ್ದಾರೆ.
ರಕ್ಷಕ್ ಬುಲೆಟ್ ಅವರ ಈ ಮಾತು ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗಿದೆ. ಹೀಗಾಗಿ ಬಿಗ್ ಬಾಸ್ ಮಾಜಿ ಸ್ಪರ್ಧಿ ರಕ್ಷಕ್ ಬುಲೆಟ್ ಹಾಗೂ ಖಾಸಗಿ ವಾಹಿನಿಯಲ್ಲಿ ಕಾರ್ಯಕ್ರಮ ಆಯೋಜಕರ ವಿರುದ್ಧ ಕ್ರಮ ಕೈಗೊಳ್ಳಲು ಹಿಂದೂ ಸಂಘಟನೆಗಳು ಆಗ್ರಹಿಸಿವೆ.
ನಿಮ್ಮ ಪ್ರತಿಕ್ರಿಯೆ ಏನು?






