ಮದ್ಯ ಪ್ರಿಯರಿಗೆ ಶಾಕ್ ಕೊಟ್ಟ ಸರ್ಕಾರ: ಮುಂದಿನ ತಿಂಗಳಿನಿಂದಲೇ ಪರಿಷ್ಕೃತ ದರ ಜಾರಿ!

ಬೆಂಗಳೂರು:- ಮದ್ಯ ಪ್ರಿಯರಿಗೆ ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಶೀಘ್ರದಲ್ಲೇ ರಾಜ್ಯದಲ್ಲಿ ಬಿಯರ್ ದರ ದುಬಾರಿಯಾಗಲಿದೆ. ಅಕ್ಟೋಬರ್ ಮೊದಲ ವಾರದಿಂದಲೇ ಮತ್ತೆ ಪರಿಷ್ಕೃತ ದರ ಜಾರಿ ಮಾಡುವ ಸಾಧ್ಯತೆಯಿದೆ.
ಈಗಾಗಲೇ ಒಂದು ವರ್ಷದ ಅವಧಿಯಲ್ಲಿ ಎರಡು ಬಾರಿ ಮದ್ಯ ದರ ಏರಿಕೆ ಮಾಡಿ ಸರ್ಕಾರ ಶಾಕ್ ನೀಡಿತ್ತು. ಇದೀಗ ಮತ್ತೆ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಹೌದು. 2023ರ ಜುಲೈನಲ್ಲಿ ಮಂಡಿಸಿದ್ದ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯನವರು ಐಎಂಎಲ್ ಮೇಲೆ ಶೇ.20 ಮತ್ತು ಬಿಯರ್ ಮೇಲೆ ಶೇ.10 ಅಬಕಾರಿ ಸುಂಕ ಹೆಚ್ಚಿಸಿದ್ದರು. ಇದಕ್ಕೂ ಮುನ್ನ ರಾಜ್ಯದಲ್ಲಿ ತಯಾರಿಸಲಾದ ಅಥವಾ ಆಮದು ಮಾಡಿಕೊಳ್ಳುವ ಬಿಯರ್ ಬಾಟಲ್ ಮೇಲೆ ಹೆಚ್ಚವರಿ ಅಬಕಾರಿ ಸುಂಕವನ್ನು ಶೇ.10ರಷ್ಟು ಹೆಚ್ಚಿಸಲಾಗಿತ್ತು.
ಈಗ ಮತ್ತೊಮ್ಮೆ ಬಿಯರ್ ಬೆಲೆ ಏರಿಕೆ ಬಗ್ಗೆ ಅಬಕಾರಿ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಇದಕ್ಕೆ ಸರ್ಕಾರ ಅಸ್ತು ಅಂದಿದ್ದು, ಅ.1 ರಿಂದ ಬೆಲೆ ಏರಿಕೆಯಾಗುವ ಸಾಧ್ಯತೆ ಖಚಿತವಾದಂತಿದೆ. ಇನ್ನೂ ಸರ್ಕಾರದ ನಿರ್ಧಾರಕ್ಕೆ ಬಾರ್ ಮಾಲೀಕರು ಬೇಸರ ವ್ಯಕ್ತಪಡಿಸಿದ್ದಾರೆ.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






