ಮನಕಲಕುವ ಘಟನೆ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಮೂವರ ಸಾವು

ಬೆಳಗಾವಿ: ನಗರದ ಜೋಶಿಮಾಳ್ನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಮನಕಲಕುವ ಘಟನೆಯಲ್ಲಿ, ಒಂದೇ ಕುಟುಂಬದ ನಾಲ್ವರು ಸದಸ್ಯರು ವಿಷ ಸೇವಿಸಿದ ಘಟನೆ ನಡೆದಿದೆ. ತಾಯಿ, ಮಗ ಮತ್ತು ಮಗಳು ಸಾವಿಗೀಡಾಗಿದ್ದರೆ, ಇನ್ನೊಬ್ಬ ಮಗಳ ಸ್ಥಿತಿ ಗಂಭೀರವಾಗಿದೆ. ಸಂತೋಷ ಕುರಡೇಕರ್, ಸುವರ್ಣ ಕುರಡೇಕರ್, ಮಂಗಳಾ ಕುರಡೇಕರ್ ಮೃತಪಟ್ಟಿದ್ದು, ಸುನಂದಾ ಕುರಡೇಕರ್ ಸ್ಥಿತಿ ಚಿಂತಾಜನಕವಾಗಿದೆ.
ತಾಯಿ, ಮಗ, ಮಗಳು ಸಾವಿಗೀಡಾದವರು. ಮತ್ತೊಬ್ಬ ಮಗಳು ಸುನಂದಾ ಕುರಡೇಕರ್ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಮಾಹಿತಿ ನೀಡಿದಂತೆ, ಕುಟುಂಬದ ಎಲ್ಲ ಸದಸ್ಯರು ಇಂದು ಬೆಳಿಗ್ಗೆ ಸುಮಾರು 9 ಗಂಟೆಗೆ ವಿಷ ಸೇವಿಸಿದ್ದಾರೆ.
ಘಟನೆಯ ನಂತರ ಎಲ್ಲರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಮಂಗಳಾ, ಸಂತೋಷ್ ಮತ್ತು ಸುವರ್ಣಾ ಅವರು ಮೃತಪಟ್ಟಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಸಂತೋಷ್ ಅಕ್ಕಸಾಲಿಗನಾಗಿದ್ದು, ಅತಿಯಾದ ಸಾಲದ ಒತ್ತಡದಲ್ಲಿದ್ದ ಎನ್ನಲಾಗಿದೆ. ಈ ದುರಂತದ ಹಿಂದಿನ ನಿಖರ ಕಾರಣವನ್ನು ತಿಳಿಯಲು ಶಹಪುರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ನಗರ ಪೊಲೀಸ್ ಆಯುಕ್ತರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






