ಮರಿಯಾ ಮಚಾಡೋಗೆ ಒಲಿದ ನೊಬೆಲ್ ಗೌರವ: ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದ ಟ್ರಂಪ್ʼಗೆ ನಿರಾಸೆ!
ಇಂದು ನೊಬೆಲ್ ಶಾಂತಿ ಪುರಸ್ಕಾರ ಘೋಷಿಸಲಾಯಿತು. ನೊಬೆಲ್ ಶಾಂತಿ ಪುರಸ್ಕಾರ ಪಡೆಯಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಏನೇ ಸರ್ಕಸ್ ಮಾಡಿದರೂ ಪ್ರಯೋಜನವಾಗಲಿಲ್ಲ. ಈ ಬಾರಿಯ ಪುರಸ್ಕಾರವೂ ಕೈತಪ್ಪಿದೆ. ಈ ವರ್ಷದ ನೊಬೆಲ್ ಶಾಂತಿ ಪ್ರಶಸ್ತಿ ವೆನೆಜುವೆಲಾದ ನಾಯಕಿ ಮರಿಯಾ ಕೊರಿನಾ ಮಚಾಡೊ ಪಾಲಾಗಿದೆ.
ಹೌದು ವೆನೆಜುವೆಲಾದ (Venezuela) ಜನರಿಗೆ ಪ್ರಜಾಪ್ರಭುತ್ವ ಹಕ್ಕುಗಳನ್ನು ಉತ್ತೇಜಿಸುವಲ್ಲಿ ಅವಿಶ್ರಾಂತ ಕೆಲಸ ಮತ್ತು ಸರ್ವಾಧಿಕಾರಿ ಪ್ರಜಾಪ್ರಭುತ್ವದ ವಿರುದ್ಧ ನ್ಯಾಯಯುತ ಮತ್ತು ಶಾಂತಿಯುತ ಪರಿವರ್ತನೆಯನ್ನು ಸಾಧಿಸಲು ಹೋರಾಟ ನಡೆಸುತ್ತಿರುವ ಮಾರಿಯಾ ಕೊರಿನಾ ಮಚಾದೋ ಅವರಿಗೆ 2025 ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲು ನಾರ್ವೆಯ ನೊಬೆಲ್ ಸಮಿತಿ ನಿರ್ಧರಿಸಿದೆ.
ಇಂದು ಸಹ ಟ್ರಂಪ್ ನಾನು 8 ಯುದ್ಧಗಳನ್ನು ನಿಲ್ಲಿಸಿದ್ದೇನೆ. ಬರಾಕ್ ಒಬಾಮ ಏನು ಮಾಡಿದ್ದಾರೆ? ಏನು ಮಾಡದ ಒಬಾಮಗೆ ನೊಬೆಲ್ ಸಿಗುವುದಾದರೆ ನನಗೆ ಯಾಕೆ ಸಿಗಬಾರದು ಎಂದು ಪ್ರಶ್ನಿಸಿ ನನಗೆ ನೊಬೆಲ್ ಪ್ರಶಸ್ತಿಯ ಕನಸನ್ನು ವ್ಯಕ್ತಪಡಿಸಿದ್ದರು.
ನಿಮ್ಮ ಪ್ರತಿಕ್ರಿಯೆ ಏನು?