ಮಹಾ ಕುಂಭಮೇಳ: ಸಂಗಮದಲ್ಲಿ ಮಿಂದೆದ್ದ ಡಿಕೆ ಶಿವಕುಮಾರ್ ದಂಪತಿ!

ಪ್ರಯಾಗ್ ರಾಜ್:- ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಮಿಂದೆದ್ದಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಪತ್ನಿ ಉಷಾ ಅವರ ಜೊತೆ ಕುಂಭಮೇಳದಲ್ಲಿ ಭಾಗವಹಿಸಿದ್ದಾರೆ. ಉತ್ತರ ಪ್ರದೇಶ ಕೈಗಾರಿಕಾ ಸಚಿವ ನಂದಗೋಪಾಲ ಗುಪ್ತಾ ಅವರು ಡಿಕೆಶಿ ದಂಪತಿಗೆ ಭವ್ಯ ಸ್ವಾಗತ ಕೋರಿದ್ದಾರೆ.
ತ್ರಿವೇಣಿ ಸಂಗಮದಲ್ಲಿ ಡಿಕೆಶಿ ದಂಪತಿ ಪುಣ್ಯಸ್ನಾನ ಮಾಡಿದರು. ಬಳಿಕ ನೊಣವಿಕೆರೆ ಅಜ್ಜಯ್ಯ ಆಶೀರ್ವಾದ ಪಡೆದರು. ಇದೇ ವೇಳೆ ಕುಂಭಮೇಳದಲ್ಲಿದ್ದ ಸಾಧು-ಸಂತರ ಆಶೀರ್ವಾದವನ್ನು ಡಿಕೆಶಿ ಪಡೆದುಕೊಂಡರು. ಅಧ್ಯಾತ್ಮದ ಕುರಿತು ಸಂತರೊಟ್ಟಿಗೆ ಚರ್ಚೆ ನಡೆಸಿದರು.
144 ವರ್ಷಗಳ ಬಳಿಕ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದೆ. 45 ದಿನಗಳ ಕಾಲ ಕುಂಭಮೇಳ ಜರುಗಲಿದೆ.
ನಿಮ್ಮ ಪ್ರತಿಕ್ರಿಯೆ ಏನು?






