ಮಹಾ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ನೆನಪಿರಲಿ ಖ್ಯಾತಿಯ ಪ್ರೇಮ್!

ಪ್ರಯಾಗ್ ರಾಜ್:- ಇಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ನೆನಪಿರಲಿ ಖ್ಯಾತಿಯ ಪ್ರೇಮ್ ಅವರು ಪುಣ್ಯಸ್ನಾನ ಮಾಡಿದರು.
ಈ ಕುರಿತು ನಟ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಕೂಡ ಹಂಚಿಕೊಂಡಿದ್ದಾರೆ. ಕುಂಭ ಮೇಳ ಪುಣ್ಯ ಸ್ನಾನ. ಎಲ್ಲರ ಬಾಳು ಅಮೃತಮಯವಾಗಿರಲಿ’ ಎಂದು ಪ್ರೇಮ್ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದರೊಂದಿಗೆ ಪುಣ್ಯ ಸ್ನಾನದ ಫೋಟೋ ಕೂಡ ನಟ ಹಂಚಿಕೊಂಡಿದ್ದಾರೆ.
ಇನ್ನೂ ದೇಶದ ಕೋಟ್ಯಂತರ ಜನ ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ಭಾಗವಹಿಸಿ ಪುನೀತರಾಗುತ್ತಿದ್ದಾರೆ
ನಿಮ್ಮ ಪ್ರತಿಕ್ರಿಯೆ ಏನು?






