ಮಹಾ ಕುಂಭಮೇಳದಲ್ಲಿ ಭಾರೀ ಕಾಲ್ತುಳಿತ: ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ತೀವ್ರ ಸಂತಾಪ

ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ತಡರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು ಗಾಯಗೊಂಡಿದ್ದಾರೆ. ಘಟನೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಕುಂಭಮೇಳದ ಪರಿಸ್ಥಿತಿಯ ಮೇಲೆ ಕಣ್ಣಿರಿಸಿದ್ದು, ಈ ಕಾಲ್ತುಳಿತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದು, ಈ ಘಟನೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಎಕ್ಸ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಪ್ರಧಾನಿ ಮೋದಿ ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು ತಮ್ಮ ಪೋಸ್ಟ್‌ನಲ್ಲಿ, ‘ಪ್ರಯಾಗ್ರಾಜ್ ಮಹಾಕುಂಭದಲ್ಲಿ ಸಂಭವಿಸಿದ ಅಪಘಾತವು ಅತ್ಯಂತ ದುಃಖಕರವಾಗಿದೆ ಎಂದಿದ್ದಾರೆ.
‘ಘಟನೆಯಲ್ಲಿ ತಮ್ಮ ಕುಟುಂಬ ಸದಸ್ಯರನ್ನು ಕಳೆದುಕೊಂಡ ಭಕ್ತರಿಗೆ ನನ್ನ ತೀವ್ರ ಸಂತಾಪಗಳು. ಎಲ್ಲಾ ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಲ್ಲಿ ತೊಡಗಿದೆ. ಈ ನಿಟ್ಟಿನಲ್ಲಿ ನಾನು ಮುಖ್ಯಮಂತ್ರಿ ಯೋಗಿ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ನಾನು ರಾಜ್ಯ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ’ ಎಂದಿ ಮೋದಿ ತಮ್ಮ ಎಕ್ಸ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






