ಮಹಾಲಕ್ಷ್ಮಿ ಮರ್ಡರ್ ಕೇಸ್ : ಶಂಕಿತ ಆರೋಪಿ ಆ*ತ್ಮಹ*ತ್ಯೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭೀಕರವಾಗಿ ನಡೆದ ಮಹಾಲಕ್ಷ್ಮಿ ಕೊಲೆ ಪ್ರಕರಣದ ತನಿಖೆ ಚುರುಕು ಗೊಂಡಿದ್ದು . ಇದರ ಬೆನ್ನಲ್ಲಿಯೇ ಪ್ರಕರಣ ಶಂಕಿತ ಆರೋಪಿ ಒಡಿಶಾದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.
ಮುಕ್ತಿರಂಜನ್ ರಾಯ್ ಆತ್ಮಹತ್ಯೆ ಮಾಡಿಕೊಂಡ ಶಂಕಿತ ಕೊಲೆ ಆರೋಪಿ. ಈತ ಮಹಾಲಕ್ಷ್ಮಿ ಕೊಲೆ ಬಳಿಕ ತಲೆಮರೆಸಿಕೊಂಡು ಓಡಾಡುತ್ತಿದ್ದ. ಈ ಸಂಬಂಧ ವಿಚಾರಣೆಗೆ ಬೆಂಗಳೂರಿನ ವೈಯಾಲಿಕಾವಲ್ ಪೊಲೀಸರು ಒಡಿಶಾಗೆ ತೆರಳಲು ಮುಂದಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ನಿಮ್ಮ ಪ್ರತಿಕ್ರಿಯೆ ಏನು?






