ಮಹಿಳೆ ಮೇಲೆ DJ ಹಳ್ಳಿ ಇನ್ಸ್ ಪೆಕ್ಟರ್ ಅತ್ಯಾಚಾರ ಆರೋಪ..! ಚಿನ್ನು, ಮುದ್ದು ಚಾಟಿಂಗ್ ವೈರಲ್
ಬೆಂಗಳೂರು: ಬೆಂಗಳೂರು ನಗರದಲ್ಲಿ ಮತ್ತೊಂದು ಶಾಕಿಂಗ್ ಘಟನೆ ಬೆಳಕಿಗೆ ಬಂದಿದೆ. ಕಾನೂನು ಕಾಯಬೇಕಾದ ಪೊಲೀಸಪ್ಪನೇ ದೂರು ನೀಡಲು ಬಂದ ಮಹಿಳೆಯನ್ನು ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಹೌದು ಡಿ.ಜೆ. ಹಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುನಿಲ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಹಾಗೂ ವಂಚನೆ ಆರೋಪ ಮಾಡಿದ್ದಾರೆ.
ಇನ್ಸ್‌ಪೆಕ್ಟರ್ ಮದುವೆಯಾಗುವುದಾಗಿ ನಂಬಿಸಿ ಕಳೆದ ಒಂದು ವರ್ಷದಲ್ಲಿ ಎರಡು–ಮೂರು ಬಾರಿ ಲೈಂಗಿಕ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಇನ್ಸ್‌ಪೆಕ್ಟರ್ ಮನೆಯಲ್ಲಿ ಹಾಗೂ ಹೋಟೆಲ್‌ನಲ್ಲಿ ಅತ್ಯಾಚಾರ ಎಸಗಿದ್ದಾರೆಯೆಂಬ ಆರೋಪ ಇದೆ.
ಅದೇ ರೀತಿ, ಮಹಿಳೆ ಜೊತೆ ಸಲುಗೆ ಬೆಳೆಸಿದ್ದ ಇನ್ಸ್‌ಪೆಕ್ಟರ್ ಆಕೆಗೆ ಮನೆ ಕೊಡ್ತೀನಿ, ಬ್ಯೂಟಿ ಪಾರ್ಲರ್ ಓಪನ್ ಮಾಡಿ ಕೊಡ್ತೀನಿ ಎಂದು ವಂಚಿಸಿದ್ದಾರಂತೆ. ಅಷ್ಟೇ ಅಲ್ಲದೇ ಇಬ್ಬರೂ ರಿಜಿಸ್ಟರ್ ಮ್ಯಾರೇಜ್ ಆಗೋಣ ಎಂದಿದ್ದ ಡಿ.ಜೆ ಹಳ್ಳಿ ಇನ್ಸ್‌ಪೆಕ್ಟರ್ ಸುನೀಲ್, ಮಾತು ಕೊಟ್ಟು ಮೋಸ ಮಾಡಿದ್ದಾರೆ ಎಂದು ಮಹಿಳೆ ಆರೋಪ ಮಾಡ್ತಿದ್ದಾರೆ..
ಇದೇ ವೇಳೆ, ಕೆಲ ಖಾಸಗಿ ಫೋಟೋ ಮತ್ತು ವೀಡಿಯೊಗಳನ್ನು ಇಟ್ಟುಕೊಂಡು ಯಾರಿಗಾದರೂ ಹೇಳಿದರೆ ಕೊಲೆ ಮಾಡುತ್ತೇನೆ” ಎಂದು ಬೆದರಿಕೆ ಹಾಕಿದ ಆರೋಪವೂ ಇದೆ. ಪ್ರತಿದಿನ ವೀಡಿಯೋ ಕಾಲ್ ಮಾಡಲು ಒತ್ತಾಯಿಸಿ ಕಿರುಕುಳ ನೀಡುತ್ತಿದ್ದಾರೆಯೆಂದೂ ಮಹಿಳೆ ತಿಳಿಸಿದ್ದಾರೆ.
ಇನ್ನು ಇನ್ಸ್‌ಪೆಕ್ಟರ್ ಸುನಿಲ್ ಹಾಗೂ ಸಂತ್ರಸ್ತೆಯ ನಡುವಿನ ವಾಟ್ಸಪ್ ಚಾಟಿಂಗ್ ಬಯಲಿಗೆ ಬಂದಿದ್ದು, ಇದರಲ್ಲಿ ಇಬ್ಬರು ಅನ್ಯೋನ್ಯವಾಗಿ ಚಿನ್ನು ಮುದ್ದು ಎಂದು ಮೆಸೇಜ್ ಮಾಡಿದ್ದಾರೆ. ಅಲ್ಲದೇ ವಿಡಿಯೋ ಹಾಗೂ ವಾಯ್ಸ್ ಕಾಲ್ ಮಾಡಿದ್ದಾರೆ. ಸದ್ಯ ವಂಚನೆಗೊಳಗಾದ ಸಂತ್ರಸ್ತ ಮಹಿಳೆ ಡಿಜಿ/ ಐಜಿಪಿಗೆ ದೂರು ನೀಡಿದ್ದಾರೆ. ಸೂಕ್ತ ನ್ಯಾಯ ಕೊಡಿಸಿ ಎಂದು ಡಿಜಿ ಬಳಿ ಸಂತ್ರಸ್ತೆ ಮನವಿ ಮಾಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?