ಮಹಿಳೆಗೆ ಅಮಾನುಷವಾಗಿ ಕೋಲಿನಿಂದ ಹೊಡೆದ ಗಂಡಸರ ಗ್ಯಾಂಗ್: ಅಂತದ್ದೇನಾಯ್ತು!?

ಕೋಲ್ಕತ್ತಾ;- ಪುರುಷರ ಗುಂಪೊಂದು ಮಹಿಳೆಯನ್ನು ಅಮಾನುಷವಾಗಿ ಕೋಲಿನಿಂದ ಹೊಡೆಯುತ್ತಿರುವ ಘಟನೆ ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಜರುಗಿದೆ.
ಆರ್‌ಜಿ ಕರ್ ಮೆಡಿಕಲ್ ಕಾಲೇಜಿನಲ್ಲಿ ತರಬೇತಿ ನಿರತ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಹತ್ಯೆಯ ಬಗ್ಗೆ ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಆಕ್ರೋಶದ ನಡುವೆ, ಮಾಲ್ಡಾದಲ್ಲಿ ಪುರುಷರ ಗುಂಪೊಂದು ಮಹಿಳೆಯ ಮೇಲೆ ಅಮಾನುಷವಾಗಿ ಕೋಲುಗಳಿಂದ ಹಲ್ಲೆ ನಡೆಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ.
ಈ ವೈರಲ್ ವಿಡಿಯೋದಲ್ಲಿ ಪುರುಷರು ಮಹಿಳೆಯನ್ನು ರಸ್ತೆಗೆ ಎಳೆದು ದೊಣ್ಣೆಯಿಂದ ಥಳಿಸಿದ್ದಾರೆ. ಈ ಘಟನೆಯನ್ನು ವೀಕ್ಷಿಸುತ್ತಿದ್ದ ಗ್ರಾಮಸ್ಥರು ಸುತ್ತಲೂ ನೆರೆದಿದ್ದರೂ ಯಾರೂ ಸಹಾಯಕ್ಕೆ ಮುಂದಾಗಲಿಲ್ಲ. ಈ ಮಹಿಳೆಯ 16 ವರ್ಷದ ಮಗಳು ಕೂಡ ತನ್ನ ತಾಯಿಯನ್ನು ಉಳಿಸಲು ಪ್ರಯತ್ನ ಮಾಡುತ್ತಿದ್ದಾರೆ.
ಗ್ರಾಮಸ್ಥರ ಪ್ರಕಾರ, ಆ ಮಹಿಳೆಯ ಕುಟುಂಬ ಮತ್ತು ಅವರ ನೆರೆಹೊರೆಯವರ ನಡುವಿನ ದೀರ್ಘಕಾಲದ ಜಮೀನು ವಿವಾದದಿಂದ ಈ ಹಲ್ಲೆ ನಡೆದಿದೆ. ಸಂತ್ರಸ್ತೆ ಮೋತಾಬರಿ ಪೊಲೀಸ್ ಠಾಣೆಯಲ್ಲಿ 6 ವ್ಯಕ್ತಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿರುವ ಪೊಲೀಸರು, “ಈ ಘಟನೆಗೆ ಸಂಬಂಧಿಸಿದಂತೆ ಎರಡೂ ಕಡೆಯವರು ಲಿಖಿತ ದೂರುಗಳನ್ನು ದಾಖಲಿಸಿದ್ದಾರೆ. ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು ತನಿಖೆ ನಡೆಯುತ್ತಿದೆ” ಎಂದು ಹೇಳಿದ್ದಾರೆ..
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






