ಮಹಿಳೆಯರಿಗೆ ಖಾಸಗಿ ಅಂಗ ತೋರಿಸಿ ವಿಕೃತಿ ಮೆರೆದಿದ್ದ ಆರೋಪಿ ಅರೆಸ್ಟ್!

ಬೆಂಗಳೂರು: ಮಹಿಳೆಯರಿಗೆ ಖಾಸಗಿ ಅಂಗ ತೋರಿಸಿ ವಿಕೃತಿ ಮೆರೆದಿದ್ದ ಆರೋಪಿಯನ್ನು ಶಿವಾಜಿನಗರ ಪೊಲೀಸರು ಬಂಧಿಸಿದ್ದಾರೆ. ಕಾರ್ತಿಕ್ ಬಂಧೀತ ಆರೋಪಿಯಾಗಿದ್ದು, ಏ.13 ರಂದು ಕ್ವೀನ್ಸ್ ರಸ್ತೆಯ ರಾಜೀವ್ ಗಾಂಧಿ ಕಾಲೋನಿಯಲ್ಲಿ ಘಟನೆ ನಡೆದಿತ್ತು. ಊಟ ಮುಗಿಸಿ ಎರಡನೇ ಮಹಡಿಗೆ ಮಲಗಲು ಮಹಿಳೆ ತೆರಳುತ್ತಿದ್ದರು.
ಈ ವೇಳೆ ಎದುರು ಮನೆಯಲ್ಲಿರುವ ಆರೋಪಿ, ಪ್ಯಾಂಟ್ ಬಿಚ್ಚಿ ಖಾಸಗಿ ಅಂಗ ತೋರಿಸಿ ವಿಕೃತಿ ಮೆರೆದಿದ್ದ. ಇದನ್ನು ಪ್ರಶ್ನೆ ಮಾಡಿದ ಮಹಿಳೆಯ ಪತಿ ಮೇಲೆ ಹಲ್ಲೆ ಕೂಡ ಮಾಡಿದ್ದ. ಅಲ್ಲದೇ ಜಗಳ ಬಿಡಿಸಲು ಬಂದವರ ಮೇಲೆಯೂ ಅಟ್ಯಾಕ್ ಮಾಡಿದ್ದ.
ಎರಡನೇ ಮಹಡಿಯಿಂದ ಹಾಲೋಬ್ಲಾಕ್, ಹೂವಿನ ಪಾಟ್ ಅನ್ನು ಕೆಳಮಹಡಿಯಲ್ಲಿದ್ದವರ ಮೇಲೆ ಎಸೆದಿದ್ದ. ಬುದ್ಧಿ ಹೇಳಲು ಹೋಗಿದ್ದವರ ಮೇಲೆಯೂ ಹಲ್ಲೆ ಮಾಡಿದ್ದ. ಘಟನೆಯಲ್ಲಿ ಏಳು ಜನರ ಮೇಲೆ ಹಲ್ಲೆ ನಡೆಸಿದ್ದ ಬಗ್ಗೆ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಶಿವಾಜಿ ನಗರ ಪೊಲೀಸರು ಆರೋಪಿ ಕಾರ್ತಿಕ್ನನ್ನು ಬಂಧಿಸಿ, ಜೈಲಿಗಟ್ಟಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






