ಮಹೇಶ್ ಶೆಟ್ಟಿ ತಿಮರೋಡಿ ದಕ್ಷಿಣ ಕನ್ನಡದಿಂದ 1 ವರ್ಷ ಗಡಿಪಾರು
ದಕ್ಷಿಣ ಕನ್ನಡ: ಧರ್ಮಸ್ಥಳ ಬುರುಡೆ ಪ್ರಕರಣ ಹಾಗೂ ಸೌಜನ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ನಾಯಕ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವರ್ಷ ಅವಧಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡುವ ಆದೇಶ ಹೊರಡಿಸಲಾಗಿದೆ.
ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರ ಆದೇಶದಂತೆ, ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಲಾಗುತ್ತಿದೆ.
ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಸುಮಾರು 32 ವಿವಿಧ ಪ್ರಕರಣಗಳು ದಾಖಲಾಗಿದ್ದು, ಅವರನ್ನು ಗಡಿಪಾರು ಮಾಡುವಂತೆ ಆಗ್ರಹಗಳು ವ್ಯಕ್ತವಾಗಿದ್ದವು. ಇದನ್ನರಿಸಿ ಸೆಪ್ಟೆಂಬರ್ 20ರಂದು ಪುತ್ತೂರು ಸಹಾಯಕ ಆಯುಕ್ತರು ಗಡಿಪಾರು ಆದೇಶ ಹೊರಡಿಸಿದ್ದರು. ಆದರೆ ನೋಟಿಸ್ ಅವರನ್ನು ಖುದ್ದಾಗಿ ಸ್ವೀಕರಿಸಬೇಕಿರುವುದರಿಂದ ಗಡಿಪಾರು ಪ್ರಕ್ರಿಯೆ ಇನ್ನೂ ಜಾರಿಗೆ ಬರಬೇಕಾಗಿದೆ.
ತಿಮರೋಡಿ ಹಲವು ಹೋರಾಟಗಳಲ್ಲಿ ಸಕ್ರಿಯರಾಗಿದ್ದು, ಧರ್ಮಸ್ಥಳ ಪ್ರಕರಣದ ಸಂಬಂಧ ಅವರ ಮನೆ ಮೇಲೆ ಎಸ್‌ಐಟಿ ದಾಳಿ ನಡೆಸಿದ ವೇಳೆ ಶಸ್ತ್ರಾಸ್ತ್ರಗಳು ಪತ್ತೆಯಾದವು. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದಲ್ಲದೆ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೂ ಅವರು ಬಂಧಿತರಾಗಿದ್ದರು.ಪ್ರಸ್ತುತ ಎಲ್ಲ ಪ್ರಕರಣಗಳು ವಿಚಾರಣಾ ಹಂತದಲ್ಲಿವೆ.
ನಿಮ್ಮ ಪ್ರತಿಕ್ರಿಯೆ ಏನು?