ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಶಾಕ್! ಮನೆ ಮೇಲೆ SIT ದಾಳಿ: ಪೊಲೀಸರಿಂದ ತೀವ್ರ ಶೋಧ
ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣ ತನಿಖೆಯಲ್ಲಿ ತೀವ್ರಗೊಳುತ್ತಿದ್ದು, ವಿಶೇಷ ತನಿಖಾ ತಂಡ (SIT) ಇಂದು ಪ್ರಕರಣ ಸಂಬಂಧ ಮಹೇಶ್ ಶೆಟ್ಟಿ ತಿಮರೋಡಿ ಅವರ ನಿವಾಸದ ಮೇಲೆ ದಾಳಿ ನಡೆಸಿದೆ.
ಸಾಕ್ಷಿಧಾರನಾಗಿ ವಿಚಾರಣೆಗೆ ಹಾಜರಾದ ಬಳಿಕ ಇದೀಗ ಆರೋಪಿಯಾಗಿ ಪರಿವರ್ತಿತನಾದ ಚಿನ್ನಯ್ಯನ ಹೇಳಿಕೆಯ ಆಧಾರದ ಮೇಲೆ ಪೊಲೀಸರು ಕೋರ್ಟ್ನಿಂದ ಸರ್ಚ್ ವಾರಂಟ್ ಪಡೆದು ತಿಮರೋಡಿಗೆ ಆಗಮಿಸಿದ್ದಾರೆ.
ಚಿನ್ನಯ್ಯ ತನ್ನ ಹೇಳಿಕೆಯಲ್ಲಿ, “ಉತ್ಕನನ ಕಾರ್ಯ ಪೂರ್ಣಗೊಂಡ ಬಳಿಕ ನಾನು ತಿಮರೋಡಿ ನಿವಾಸಕ್ಕೆ ಹೋಗುತ್ತಿದ್ದೆ. ಅಲ್ಲಿ ನನಗೆ ಒಂದು ಕೊಠಡಿಯನ್ನು ನೀಡಲಾಗಿತ್ತು. ಅಲ್ಲಿ ನಾನು ನನ್ನ ಬಟ್ಟೆ, ಬ್ಯಾಗ್ ಇಟ್ಟಿದ್ದೆ. ನಾನು ಮೊಬೈಲ್ ಬಳಸುತ್ತಿರಲಿಲ್ಲ. ನನ್ನ ಮೊಬೈಲ್ ತಿಮರೋಡಿ ಕಡೆಯವರ ಜೊತೆ ಇತ್ತು” ಎಂದು ಸ್ಪಷ್ಟಪಡಿಸಿದ್ದಾನೆ.
ಈ ಹೇಳಿಕೆಯ ಹಿನ್ನೆಲೆ ಮೇಲೆ SIT ತಂಡವು ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆಯನ್ನು ಶೋಧಿಸಿದ್ದು, ತನಿಖೆಗೆ ಅಗತ್ಯ ದಾಖಲೆಗಳು ಹಾಗೂ ಸುಳಿವುಗಳನ್ನು ಸಂಗ್ರಹಿಸುತ್ತಿದೆ.
ನಿಮ್ಮ ಪ್ರತಿಕ್ರಿಯೆ ಏನು?