ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಫೈರಿಂಗ್...! ಮೂಗು, ಬಲಗೈಗೆ ಗುಂಡೇಟು, ಆಸ್ಪತ್ರೆಗೆ ಶಿಫ್ಟ್

ಎಪ್ರಿಲ್ 19, 2025 - 09:01
 0  10
ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಫೈರಿಂಗ್...! ಮೂಗು, ಬಲಗೈಗೆ ಗುಂಡೇಟು, ಆಸ್ಪತ್ರೆಗೆ ಶಿಫ್ಟ್

ರಾಮನಗರ: ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಮಿಡ್ ನೈಟ್ ಫೈರಿಂಗ್ ನಡೆದಿದೆ. ಬಿಡದಿಯ ಮುತ್ತಪ್ಪ ರೈ ನಿವಾಸದ ಮುಂದೆಯೇ ಅಘಾಂತಕರಿಂದ ಫೈರಿಂಗ್ ನಡೆದಿದೆ. ತಡರಾತ್ರಿ ೧೨.೫೦ ಸುಮಾರಿಗೆ ನಡೆದಿರುವ ಘಟನೆಯಾಗಿದೆ. ರಿಕ್ಕಿ ರೈ ಅವರನ್ನು ಗುರಿಯಾಗಿಸಿಕೊಂಡು ಗುಂಡು ಹಾರಿಸಲಾಗಿದೆ. ವೇಳೆ ರಿಕ್ಕಿ ರೈ, ಮೂಗು, ಕೈಗೆ ಗುಂಡು ತಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ಮೂಲಗಳು ತಿಳಿಸಿವೆ.

ಏನಿದು ಘಟನೆ?
ರಿಕ್ಕಿ ರೈ ತಮ್ಮ ಫಾರ್ಚೂನರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆದಿದೆ. ಮನೆಯ ಕಾಂಪೌಂಡ್ ಬಳಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ರಿಕ್ಕಿ ರೈ ಅವರಿಗೆ ಗಾಯಗಳಾಗಿವೆ. ತಕ್ಷಣವೇ ಅವರನ್ನು ಬಿಡದಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಡ್ರೈವಿಂಗ್ ಸೀಟ್ ಟಾರ್ಗೆಟ್ ಮಾಡಿ ಫೈರಿಂಗ್:
ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮೇಲೆ ನಡೆದ ಶೂಟೌಟ್ನಲ್ಲಿ ದುಷ್ಕರ್ಮಿಗಳು ಡ್ರೈವಿಂಗ್ ಸೀಟ್ನನ್ನೇ ಗುರಿಯಾಗಿಸಿ 2 ಸುತ್ತು ಗುಂಡುಗಳನ್ನು ಹಾರಿಸಿದ್ದಾರೆ. ರಿಕ್ಕಿ ರೈ ಸಾಮಾನ್ಯವಾಗಿ ತಾನೇ ಕಾರು ಚಾಲನೆ ಮಾಡುತ್ತಿದ್ದ ಕಾರಣ, ದಾಳಿಕೋರರು ಡ್ರೈವಿಂಗ್ ಸೀಟ್ ಮೇಲೆ ಗುರಿ ಇಟ್ಟಿದ್ದರು. ಆದರೆ,

ಬಾರಿ ಕಾರನ್ನು ಚಾಲಕ ರಾಜು ಚಲಾಯಿಸುತ್ತಿದ್ದು, ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆದರೆ, ಪಕ್ಕದ ಸೀಟ್ನಲ್ಲಿದ್ದ ರಿಕ್ಕಿ ರೈ ಅವರ ಮೂಗು ಮತ್ತು ಕೈಗೆ ಗುಂಡು ತಾಕಿದ್ದು, ಗಂಭೀರ ಗಾಯಗೊಂಡಿದ್ದಾರೆ. ಘಟನೆಯ ಸ್ಥಳಕ್ಕೆ ರಾಮನಗರ ಎಸ್ಪಿ ಶ್ರೀನಿವಾಸ್ ಗೌಡ ಮತ್ತು ಡಿವೈಎಸ್ಪಿ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow