ಮಾಜಿ ಪ್ರಧಾನಿ HD ದೇವೇಗೌಡರ ನಿವಾಸಕ್ಕೆ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ!

ಬೆಂಗಳೂರು: ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಶ್ರೀಮತಿ ಸುದೇಶ್ ಧನಕರ್ ಅವರು ಕರ್ನಾಟಕ ಪ್ರವಾಸಕ್ಕಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ. ಇನ್ನೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರನ್ನು ಪದ್ಮನಾಭನಗರದ ನಿವಾಸದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿಯಾದರು.
ಉಪರಾಷ್ಟ್ರಪತಿ ಜಗದೀಪ್ ಹಾಗೂ ಅವರ ಪತ್ನಿ ಸುದೇಶ್ ಧನಕರ್ ಅವರಿಗೆ ಹೂಗುಚ್ಛ ನೀಡಿ ಮಾಜಿ ಪ್ರಧಾನಿ ದೇವೇಗೌಡರು ಸ್ವಾಗತ ಕೋರಿದರು. ಪರಸ್ಪರರು ಕುಶಲೋಪರಿ ವಿಚಾರಿಸಿಕೊಂಡರು. ಈ ವೇಳೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕೂಡ ಹಾಜರಿದ್ದರು.
ಜಗದೀಪ್ ಧನಕರ್ ಅವರು, ದೇವೇಗೌಡರು ಹಾಗೂ ಅವರ ಪತ್ನಿ ಚನ್ನಮ್ಮ ಅವರ ಆರೋಗ್ಯ ವಿಚಾರಿಸಿದರು. ಬಳಿಕ ಅವರ ಮನೆಯಲ್ಲಿ ಉಪಾಹಾರ ಸ್ವೀಕರಿಸಿದರು. ನಂತರ ಉಪರಾಷ್ಟ್ರಪತಿ ದಂಪತಿ ಜೊತೆಗೆ ದೇವೇಗೌಡರ ಕುಟುಂಬ ಸದಸ್ಯರೆಲ್ಲರೂ ಸೇರಿ ಫೋಟೋ ತೆಗೆಸಿಕೊಂಡರು. ದೊಡ್ಡಗೌಡರ ನಿವಾಸಕ್ಕೆ ಉಪರಾಷ್ಟ್ರಪತಿಗಳ ಭೇಟಿಯು ಹಲವು ಸ್ಮರಣೀಯ ಸನ್ನಿವೇಶಗಳಿಗೆ ಸಾಕ್ಷಿಯಾಯಿತು. ಹೆಚ್.ಡಿ.ದೇವೇಗೌಡರ ಹೆಗಲ ಮೇಲೆ ಕೈಹಾಕಿ ಹೆಚ್.ಡಿ.ದೇವೇಗೌಡರು ಫೋಟೋ ತೆಗೆಸಿಕೊಂಡರು.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






