ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ನಿಧನ: ಇಂದು ನಡೆಯಬೇಕಿದ್ದ ವಿವಿ ಪರೀಕ್ಷೆಗಳು ಮುಂದೂಡಿಕೆ!

ಬೆಂಗಳೂರು: ನರೇಂದ್ರ ಮೋದಿಗೂ ಮುನ್ನ ಎರಡು ಅವಧಿಗಳ ಕಾಲಕ್ಕೆ ದೇಶದ ಪ್ರಧಾನಿ ಪಟ್ಟವನ್ನು ಅಲಂಕರಿಸಿದ್ದ ಮನಮೋಹನ್ ಸಿಂಗ್ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ರ್ನಾಟಕ ಸರ್ಕಾರ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆ ಮತ್ತು ಸರ್ಕಾರಿ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.
ಅದಲ್ಲದೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಮೈಸೂರು ವಿವಿಯ ಎಲ್ಲಾ ಪರೀಕ್ಷೆಗಳು ಮುಂದೂಡಿಕೆಯಾಗಿವೆ ಎಂದು ಮಾಹಿತಿ ನೀಡಿದ್ದಾರೆ. ಪದವಿ, ಸ್ನಾತಕೋತ್ತರ ಪರೀಕ್ಷೆಗಳು ಮುಂದೂಡಿಕೆಯಾಗಿದ್ದು, ಮುಂದಿನ ಪರೀಕ್ಷಾ ದಿನವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಗೌರವಾರ್ಥ ಭಾರತ ಸರ್ಕಾರ ಏಳು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಮಾಜಿ ಪ್ರಧಾನಿ ಅವರ ಅಂತ್ಯಕ್ರಿಯೆಯನ್ನು ಸಂಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ನಿಮ್ಮ ಪ್ರತಿಕ್ರಿಯೆ ಏನು?






