ಮಾಜಿ ಶಾಸಕ ಮೊಯಿದ್ದೀನ್ ಬಾವಾ ತಮ್ಮ ಆತ್ಮಹತ್ಯೆ ಬಗ್ಗೆ ಕಮಿಷನರ್ ಏನಂದ್ರು.?

ಅಕ್ಟೋಬರ್ 7, 2024 - 22:01
 0  10
ಮಾಜಿ ಶಾಸಕ ಮೊಯಿದ್ದೀನ್ ಬಾವಾ ತಮ್ಮ ಆತ್ಮಹತ್ಯೆ ಬಗ್ಗೆ ಕಮಿಷನರ್ ಏನಂದ್ರು.?

 

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸೋದರ ಮುಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ. 28 ಗಂಟೆಗಳ ಕಾರ್ಯಾಚರಣೆ ಬಳಿಕ ಕೂಳೂರಿನ ಸೇತುವೆ ಬಳಿ ಮುಮ್ತಾಜ್ ಅಲಿ ಶವ ಪತ್ತೆಯಾಗಿದೆ. ಮುಳುಗು‌ ತಜ್ಞರು ಮೃತದೇಹವನ್ನು ಹೊರತೆಗೆದಿದ್ದು ಮೃತದೇಹ ಕಂಡು ಮಾಜಿ ಶಾಸಕ ಮೊಯಿದ್ದೀನ್ ಬಾವಾ ಕಣ್ಣೀರು ಹಾಕಿದ್ದಾರೆ. ಈ ಪ್ರಕರಣಕ್ಕೆ ಸಂಬಧಿಸಿದಂತೆ ಮಾತನಾಡಿದ  ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸ್ಪೋಟಕ ಮಾಹಿತಿ ಹೇಳಿದ್ದಾರೆ.

ಮುಮ್ತಾಜ್ ಅಲಿ ಸಮಾಜದ ಗೌರವಾನ್ವಿತ ವ್ಯಕ್ತಿಯಾಗಿದ್ದಾರೆ. ಅವರ ಗೌರವ ಹಾಳು ಮಾಡಲು ಮಹಿಳೆಯನ್ನು ಬಳಸಿಕೊಂಡು ಷಡ್ಯಂತ್ರ ರೂಪಿಸಿದ್ದಾರೆ. ಮುಮ್ತಾಜ್ ಆಲಿ ಅವರಿಗೆ ಅಕ್ರಮ ಸಂಬಂಧ ಇದೆ ಎಂದು ರೆಹಮತ್ ಸುಳ್ಳು ಪ್ರಚಾರ ಮಾಡಿ ಬೆದರಿಕೆ ಹಾಕಿದ್ದಾನೆ. 2024ರ ಜುಲೈನಿಂದ ಈವರೆಗೆ ಮುಮ್ತಾಜ್ ಅಲಿ ಅವರಿಂದ 50 ಲಕ್ಷ ರೂ. ವಸೂಲಿ ಮಾಡಿದ್ದಾರೆ. 25 ಲಕ್ಷ ರೂ. ಹಣವನ್ನು ಮಹಿಳೆ ಚೆಕ್ ಮೂಲಕ ಪಡೆದಿದ್ದಾಳೆ.

ಸತ್ತಾರ್ ಎಂಬಾತ ಮುಮ್ತಾಜ್ ಅಲಿಯ ರಾಜಕೀಯ ವಿರೋಧಿಯಾಗಿದ್ದಾನೆ. ಅಕ್ರಮ ಸಂಬಂಧ ಇದೆ ಎಂದು ಇವರು ನಿರಂತರ ಬ್ಲ್ಯಾಕ್ ಮೇಲ್ ಮಾಡಿದ್ದರು. ಜೀವ ಬೆದರಿಕೆ ಜೊತೆಗೆ ಮುಮ್ತಾಜ್ ಆಲಿ ಕುಟುಂಬಕ್ಕೂ ಬೆದರಿಸಿದ್ದರು. ಹೀಗಾಗಿಯೇ ಸಹೋದರ ಮುಮ್ತಾಜ್ ಆಲಿ ಮೆಸೇಜ್ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮುಮ್ತಾಜ್ ಅಲಿ ಸಹೋದರ ಹೈದರ್ ದೂರು ನೀಡಿದ್ದಾರೆ. ಸದ್ಯ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಅದಲ್ಲದೆ ‘ಸೆಕ್ಸ್ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್​ಮೇಲ್ ಎಂದು ದೂರು ಬಂದಿದೆ. ಆರೋಪಿಗಳು ದೇಶ ಬಿಟ್ಟು ಹೋಗದಂತೆ ಎಲ್​ಒಸಿ ಜಾರಿ ಮಾಡಿದ್ದೇವೆ. ಮುಂಜಾನೆ ಮುಮ್ತಾಜ್ ಅಲಿ ನದಿಗೆ ಹಾರಿರುವ ಮಾಹಿತಿ ಬಂದಿತ್ತು. ಹತ್ತು ಗಂಟೆಗೆ ಮುಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ. ಮುಮ್ತಾಜ್ ಅಲಿ ಸಹೋದರ ಮೊಯಿದ್ದೀನ್ ಬಾವಾ ಅವರು ಹನಿಟ್ರ್ಯಾಪ್ ಮಾಡಿದ್ದಾರೆಂದು ಕಾವೂರು ಠಾಣೆಗೆ ದೂರು ನೀಡಿದ್ದಾರೆ ಎಂದರು.

 ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow