ಮಾಜಿ ಸಚಿವ ಈಶ್ವರಪ್ಪ ಸೇರಿ ಕುಟುಂಬದ ವಿರುದ್ಧದ ಭ್ರಷ್ಟಾಚಾರ ಆರೋಪ..! FIR ದಾಖಲು
ಬೆಂಗಳೂರು: ಆದಾಯ ಮೀತಿ ಅಕ್ರಮ ಆಸ್ತಿ ಗಳಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಪುತ್ರ ಕಾಂತೇಶ್ ಮತ್ತು ಸೊಸೆ ಶಾಲಿನಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೊಗ್ಗದ ವಕೀಲ ಬಿ ವಿನೋದ್ ಸಲ್ಲಿಸಿದ್ದ ಖಾಸಗಿ ದೂರಿಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಕ್ರಿಮಿನಲ್ ಪ್ರಕರಣ ಬಗ್ಗೆ ತನಖೆ ನಡೆಸಿ ವರದಿ ನೀಡುವಂತೆ ಲೋಕಾಯುಕ್ತ ಪೊಲೀಸ್ ಗೆ ಆದೇಶಿಸಿದೆ. ಆದ್ದರಿಂದ ಲೋಕಾಯುಕ್ತ ತನಿಖೆಗೆ ಮುಂದಾಗಿದೆ.
ಖಾಸಗಿ ದೂರಿನ ಅನ್ವಯ ಲೋಕಾಯುಕ್ತಕ್ಕೆ ಕೋರ್ಟ್ ಸೂಚನೆ ನೀಡಿತ್ತು. ಕೋರ್ಟ್ ಸೂಚನೆ ಬಳಿಕ ಲೋಕಾಯುಕ್ತ ಠಾಣೆಯಲ್ಲಿ ಕೇಸ್ ಆಗಿದೆ. ಪ್ರಕರಣದ ಬೆನ್ನಲ್ಲೇ ದಾಖಲೆಗಳನ್ನ ಸಲ್ಲಿಸುವಂತೆ ನೋಟಿಸ್ ನೀಡಲಾಗಿದೆ. ದೂರು ನೀಡಿದ್ದ ವಕೀಲ ವಿನೋದ್ಗೆ ದಾಖಲಾತಿ ಸಲ್ಲಿಸಲು ನೋಟಿಸ್ ಕೊಡಲಾಗಿದೆ. ಜುಲೈ 4ರ ಬೆಳಗ್ಗೆ 11 ಗಂಟೆಗೆ ಶಿವಮೊಗ್ಗ ಲೋಕಾಯುಕ್ತದ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?