ಮಾಜಿ ಸಚಿವ ಡಾ. ಕೆ ಸುಧಾಕರ್ ಹೆಸರು ಬರೆದಿಟ್ಟು ಚಾಲಕ ಸೂಸೈಡ್..!

ಆಗಸ್ಟ್ 7, 2025 - 12:09
 0  28
ಮಾಜಿ ಸಚಿವ ಡಾ. ಕೆ ಸುಧಾಕರ್ ಹೆಸರು ಬರೆದಿಟ್ಟು ಚಾಲಕ ಸೂಸೈಡ್..!

ಚಿಕ್ಕಬಳ್ಳಾಪುರ: ಮಾಜಿ ಸಚಿವ ಹಾಗೂ ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಹೆಸರು ಡೆತ್ನೋಟ್ನಲ್ಲಿ ಬರೆದಿಟ್ಟು, ಕಾರು ಚಾಲಕನೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜಿಲ್ಲಾ ಪಂಚಾಯತಿ ಸಭಾಂಗಣದ ಹಿಂಭಾಗದಲ್ಲಿರುವ ಮರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

 ಚಿಕ್ಕಬಳ್ಳಾಪುರದ ಬಾಪೂಜಿನಗರದ ನಿವಾಸಿ ಬಾಬು (32) ಆತ್ಮಹತ್ಯೆಗೆ ಶರಣಾಗಿದ್ದಾರೆ. ನನ್ನ ಸಾವಿಗೆ ಸಂಸದ ಡಾ ಕೆ ಸುಧಾಕರ್ ಕಾರಣ. ಚಿಕ್ಕಕಾಡಿಗಾನಹಳ್ಳಿ ನಾಗೇಶ್ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ 25 ಲಕ್ಷ ಹಣ ಪಡೆದು ವಂಚನೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಜಿಲ್ಲಾ ಪಂಚಾಯತಿ ಲೆಕ್ಕ ಸಹಾಯಕರ ವಿರುದ್ದವೂ ಡೆತ್ನೋಟ್ನಲ್ಲಿ ಬಾಬು ಹಲವು ಆರೋಪ ಮಾಡಿದ್ದಾರೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow