ಮಾಸ್ಕ್ ಮ್ಯಾನ್ ಅರೆಸ್ಟ್: ಒಂದೊಂದೇ ಸತ್ಯಗಳು ಹೊರಗೆ ಬರುತ್ತಿವೆ - ವೀರೇಂದ್ರ ಹೆಗ್ಗಡೆ

ಆಗಸ್ಟ್ 23, 2025 - 18:04
 0  19
ಮಾಸ್ಕ್ ಮ್ಯಾನ್ ಅರೆಸ್ಟ್: ಒಂದೊಂದೇ ಸತ್ಯಗಳು ಹೊರಗೆ ಬರುತ್ತಿವೆ - ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದಿರುವ ಮಾಸ್ಕ್ ಮ್ಯಾನ್ ಬಂಧನದ ಕುರಿತು ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, “ಈಗ ಒಂದೊಂದೇ ಸತ್ಯಗಳು ಹೊರಗೆ ಬರುತ್ತಿವೆ. ನನಗೆ ಬೆಂಬಲವಾಗಿ ನಿಂತ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು” ಎಂದು ಹೇಳಿದ್ದಾರೆ.

ಅವರು ಮುಂದುವರಿದು, “ಎಸ್‌ಐಟಿ ತನಿಖೆ ನಡೆಯುತ್ತಿರುವ ಹಂತದಲ್ಲಿ ನಾನು ಹೆಚ್ಚಿನದನ್ನು ಹೇಳುವುದಿಲ್ಲ. ಆದರೆ ಧರ್ಮಸ್ಥಳಕ್ಕೆ ಬಂದು ಬೆಂಬಲ ಸೂಚಿಸಿರುವ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ” ಎಂದರು.

ತುಳುವಿನಲ್ಲಿ ಭಕ್ತರನ್ನುದ್ದೇಶಿಸಿ ಮಾತನಾಡಿದ ಹೆಗ್ಗಡೆ, “ಸತ್ಯಗಳನ್ನು ತೊಳೆದು ಇಟ್ಟಂತಾಗಿದೆ. ಕ್ಷೇತ್ರದ ಮೇಲಿನ ಅಭಿಮಾನ ಹೀಗೆಯೇ ಇರಲಿ. ಎಲ್ಲರ ಪ್ರೀತಿ ಮತ್ತು ವಿಶ್ವಾಸ ಹೀಗೆಯೇ ಮುಂದುವರಿಯಲಿ” ಎಂದು ಆಶಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow