ಮೀಟರ್ ಬಡ್ಡಿ ದಂಧೆ ಕಿರುಕುಳಕ್ಕೆ ಮಹಿಳೆ ಬಲಿ - 60 ಸಾವಿರಕ್ಕೆ 2 ಲಕ್ಷ ವಸೂಲಿ!?

ಎಪ್ರಿಲ್ 4, 2025 - 15:59
 0  12
ಮೀಟರ್ ಬಡ್ಡಿ ದಂಧೆ ಕಿರುಕುಳಕ್ಕೆ ಮಹಿಳೆ ಬಲಿ - 60 ಸಾವಿರಕ್ಕೆ 2 ಲಕ್ಷ ವಸೂಲಿ!?

ಚಿತ್ರದುರ್ಗ:-ಮೀಟರ್ ಬಡ್ಡಿ ದಂಧೆ ಕಿರುಕುಳದಿಂದ ಮಹಿಳೆಯೋರ್ವರು ನೇಣಿಗೆ ಶರಣಾಗಿರುವ ಘಟನೆ ಇಲ್ಲಿನ ಚಿತ್ರದುರ್ಗದ ಹಿರಿಯೂರಿನಲ್ಲಿ ಜರುಗಿದೆ. 

ಸರೋಜಮ್ಮ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಮೃತ ಸರೋಜಮ್ಮ, ತಾನು ಪಡೆದ 60 ಸಾವಿರಕ್ಕೆ 2 ಲಕ್ಷ ಬಡ್ಡಿ ಕಟ್ಟಿದ್ದರು. ಆದರೂ ಅಸಲು ಹಾಗೂ ಬಡ್ಡಿ ಕಟ್ಟುವಂತೆ ಮೀಟರ್ ದಂಧೆಕೋರರು ನಿತ್ಯವೂ ಕಿರುಕುಳ ನೀಡುತ್ತಿದ್ದರಂತೆ. ಈ ಕಿರುಕುಳ ತಾಳಲಾರದೆ ಮಹಿಳೆ ನೇಣಿಗೆ ಶರಣಾಗಿರುವ ಮಾಹಿತಿ ಲಭ್ಯವಾಗಿದೆ. 

ಹಿರಿಯೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow