ಮುಖ ಸುಟ್ಟ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ: ಅತ್ಯಾಚಾರದ ಶಂಕೆ!?

ಪಶ್ಚಿಮ ಬಂಗಾಳ:- ರಸ್ತೆ ಬದಿ ಮುಖ ಸುಟ್ಟಿರುವ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.
ಮಹಿಳೆಯ ಮುಖ ಗುರುತಿಸಲಾಗದಷ್ಟು ಸುಟ್ಟು ಹೋಗಿತ್ತು. ಸ್ಥಳೀಯರು ಬೆಳಗಿನ ವಾಕಿಂಗ್ ಮಾಡುವಾಗ ಶವವನ್ನು ಕಂಡು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.
ಮಹಿಳೆಯನ್ನು ಬೇರೆಡೆ ಕೊಂದು, ಆಕೆಯ ದೇಹವನ್ನು ಅಪರಿಚಿತ ದುಷ್ಕರ್ಮಿಗಳು ಪ್ರದೇಶದಲ್ಲಿ ಎಸೆಯುವ ಮೊದಲು ಆಕೆಯ ಮುಖಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಹೇಳಲಾಗುತ್ತಿದೆ.
ಸಾಕ್ಷ್ಯ ನಾಶಪಡಿಸಲು ಆಕೆಯ ಮೇಲೆ ಅತ್ಯಾಚಾರ ನಡೆಸಿ ಸುಟ್ಟು ಹಾಕಿರಬಹುದು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಘಟನೆಯಿಂದ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದ್ದು, ಅಧಿಕಾರಿಗಳು ಶೀಘ್ರ ಕ್ರಮಕೈಗೊಳ್ಳಬೇಕೆಂದು ನಿವಾಸಿಗಳು ಆಗ್ರಹಿಸಿದ್ದಾರೆ.
ಒಟ್ಟಾರೆ ಇದೊಂದು ಮನಕಲಕುವ ಘಟನೆ ಆಗಿದೆ.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






