ಮುಡಾ ಕೇಸ್: ಸಿಎಂಗೆ ಹೈಕೋರ್ಟ್ ನೋಟಿಸ್ - ನ.26ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ಇದೀಗ ಸಿಬಿಐ ತನಿಖೆ ಭೀತಿ ಎದುರಾಗಿತ್ತು. ದೂರುದಾರ ಸ್ನೇಹಮಯಿ ಕೃಷ್ಣ ಅವರು ಈ ಒಂದು ಪ್ರಕರಣ ಸಿಬಿಐ ತನಿಖೆಗೆ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ಕೈಗೆತ್ತಿಕೊಂಡ ವೇಳೆಯಲ್ಲಿ ಕಾಲಾವಕಾಶ ಕೋರಿದ ಹಿನ್ನಲೆಯಲ್ಲಿ ನವೆಂಬರ್.26ಕ್ಕೆ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿಕೆ ಮಾಡಿದೆ.
ಹೌದು ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯ ಮೇರೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ. ನ.25 ರವರೆಗೆ ನಡೆಸುವ ತನಿಖೆಯ ವಿವರಗಳನ್ನು ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ಸೂಚಿಸಿದ್ದು, ಅರ್ಜಿಯ ಮುಂದಿನ ವಿಚಾರಣೆಯನ್ನು ನ.26ಕ್ಕೆ ಮುಂದೂಡಿದೆ.
ನಿಮ್ಮ ಪ್ರತಿಕ್ರಿಯೆ ಏನು?






