ಮುಡಾ ಹಗರಣ, ನಕಲಿ ಸಹಿ ಆರೋಪ: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧ ಮೈಸೂರಿನಲ್ಲಿ ದೂರು ದಾಖಲು

ಆಗಸ್ಟ್ 28, 2024 - 13:08
 0  21
ಮುಡಾ ಹಗರಣ, ನಕಲಿ ಸಹಿ ಆರೋಪ: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧ ಮೈಸೂರಿನಲ್ಲಿ ದೂರು ದಾಖಲು
FOCUS KARNATAKA Siddharamaya

ಮುಡಾ ಹಗರಣ, ನಕಲಿ ಸಹಿ ಆರೋಪ: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧ ಮೈಸೂರಿನಲ್ಲಿ ದೂರು ದಾಖಲು


ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಒಂದಲ್ಲ ಒಂದು ಕಂಟಕ ತಪ್ಪುತ್ತಲೇ ಇಲ್ಲ. ಒಂದೆಡೆ, ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್​ನಲ್ಲಿ ಗುರುವಾರ ವಿಚಾರಣೆ ನಡೆಯಲಿದೆ. ಈ ಸಂದರ್ಭದಲ್ಲೇ ಇದೀಗ ಮೈಸೂರಿನಲ್ಲಿ ಅವರ ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲಾಗಿದೆ. ನಕಲಿ ಸಹಿ ವಿಚಾರವಾಗಿ ಪಾರ್ವತಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಬುಧವಾರ ದೂರು ನೀಡಿದ್ದಾರೆ.

ಸಿಎಂಗೆ ಸಾಲು ಸಾಲು ಸಂಕಷ್ಟ

ವಿಡಿಯೋ ನೋಡಲು ಕೆಳಗಿನ ಪೋಟೋ ಮೇಲೆ ಕ್ಲಿಕ್ ಮಾಡಿ.

ನಕಲಿ ದಾಖಲೆ ಸೃಷ್ಟಿ ಹಾಗೂ ಕಡತ ನಾಶದ ಬಗ್ಗೆ ಸ್ನೇಹಮಯಿ ಕೃಷ್ಣ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪಾರ್ವತಿ ಬರೆದಿದ್ದ ಮೂಲ ಪತ್ರ ನಾಶ ಮಾಡಿ, ಇತ್ತೀಚಿಗೆ ಸೃಷ್ಟಿಸಿರುವ ಪತ್ರವನ್ನು ಕಡತಕ್ಕೆ ಸೇರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹಾಗೂ ಸಹಚರರ ವಿರುದ್ಧವೂ ಕ್ರಮ ವಹಿಸುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ.

ಸಿಎಂ ಬಿಡುಗಡೆ ಮಾಡಿದ್ದ ಪತ್ರದಲ್ಲಿ ವೈಟ್ನರ್ ಹಿಂದಿನ ಅಕ್ಷರ ತೋರಿಸಲಾಗಿತ್ತು. ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ ಎಂಬ ಅಕ್ಷರಗಳ ಮೇಲೆ ವೈಟ್ನರ್ ಹಾಕಲಾಗಿತ್ತು. ಈಗ ಆ ಮೂಲ ಪತ್ರ ತೋರಿಸಿರುವ ಬಗ್ಗೆಯೇ ದೂರು ದಾಖಲಾಗಿದೆ. ಪತ್ರದಲ್ಲಿರುವ ಪಾರ್ವತಿ ಅವರ ಸಹಿ ಹಾಗೂ ಮಾಹಿತಿ ಹಕ್ಕಿನಲ್ಲಿ ಪಡೆದ ಪತ್ರದಲ್ಲಿ ಇರುವ ಸಹಿ ಬದಲಾವಣೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow