ಮುಡಾ ಹಗರಣ: ಸಿಬಿಐಗೆ ವಹಿಸುವಂತೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ನವೆಂಬರ್ 26, 2024 - 12:00
 0  8
ಮುಡಾ ಹಗರಣ: ಸಿಬಿಐಗೆ ವಹಿಸುವಂತೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಉಪಚುನಾವಣೆ ಮುಗಿದಿದೆ. ಸಿಎಂ ಸಿದ್ದರಾಮಯ್ಯಗೆ ಶಕ್ತಿ ಬಂದಿದೆ. ಇದೇ ಹೊತ್ತಲ್ಲಿ ಮುಡಾ ಹಗರಣವನ್ನ ಸಿಬಿಐಗೆ ವಹಿಸುವಂತೆ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆದಿದೆ. ಇನ್ನೂ ಇದಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಡಿ.10ಕ್ಕೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ. 

ಆರೋಪಿ ದೇವರಾಜು ಪರ ವಕೀಲರು ವಾದ ಮಂಡಿಸಿ, ವಿಭಾಗೀಯ ಪೀಠದಲ್ಲಿ ಡಿ.5 ಕ್ಕೆ ವಿಚಾರಣೆ ಬಾಕಿ ಇದೆ. ಹೀಗಾಗಿ ವಿಭಾಗೀಯ ಪೀಠದಲ್ಲಿ ವಿಚಾರಣೆ ಮುಕ್ತಾಯದ ಬಳಿಕ ಇಲ್ಲಿ ವಿಚಾರಣೆ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದರು. ಇದಕ್ಕೆ ಸ್ನೇಹಮಯಿ ಕೃಷ್ಣ ಪರ ವಕೀಲ ಆಕ್ಷೇಪ ವ್ಯಕ್ತಪಡಿಸಿದರು.

ಆ ಅರ್ಜಿ ಸಂದರ್ಭದಲ್ಲಿ ಇದನ್ನು ಮುಂದೂಡಬೇಕು ಅಂತ ಹೇಳಿಲ್ಲ ಎಂದು ಸ್ನೇಹಮಯಿ ಕೃಷ್ಣ ಪರ ವಕೀಲ ರಾಘವನ್ ತಿಳಿಸಿದರು. ಅಲ್ಲದೇ, ಇಂದು ಲೋಕಾಯುಕ್ತ ವರದಿ ಪಡೆಯಿರಿ ಎಂದು ರಾಘವನ್ ಮನವಿ ಮಾಡಿದರು. ಅದಕ್ಕೆ ನ್ಯಾಯಾಧೀಶರು, ಇವತ್ತು ಅರ್ಜಿ ವಿಚಾರಣೆ ನಡುತ್ತಿಲ್ಲ. ಹೀಗಾಗಿ ಡಿ.10 ಕ್ಕೆ ಮುಂದೂಡಲಾಗುವುದು ಎಂದು ಆದೇಶಿಸಿದರು. ಡಿಸೆಂಬರ್ 10ರ ಮಧ್ಯಾಹ್ನ 2:30 ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ. ಅವತ್ತೇ ವಾದ-ಪ್ರತಿವಾದ ಮುಕ್ತಾಯ ಮಾಡಬೇಕು ಎಂದು ಸೂಚನೆ ನೀಡಿದರು.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow