ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ FIR ದಾಖಲು!

ಮೈಸೂರು:- ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಉದಯಗಿರಿ ಪೊಲೀಸ್ ಠಾಣೆಯಲ್ಲಿ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ FIR ದಾಖಲಾಗಿದೆ. ಮೈಸೂರು ಯುವ ಕಾಂಗ್ರೆಸ್ ಮುಖಂಡ ಸೈಯದ್ ಅಬ್ರರ್ ನೀಡಿದ ದೂರಿನ ಅನ್ವಯ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಉದಯಗಿರಿ ಪೊಲೀಸ್ ಠಾಣೆ ಮೇಲೆ ಫೆ.10ರಂದು ಮುಸ್ಲಿಂ ಯುವಕರ ಗುಂಪು ದಾಂಧಲೆ ನಡೆಸಿತ್ತು. ಈ ಪ್ರಕರಣದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡುವಾಗ ಪ್ರತಾಪ್ ಸಿಂಹ ಅವರು ಮುಸ್ಲಿಮರ ಬಗ್ಗೆ ಅವಹೇಳಕಾರಿ ಹೇಳಿಕೆ ನಿಡಿದ್ದರು ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






