ಮೂರು ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆ: ಯಾರಿಗೆ ಮುನ್ನಡೆ, ಯಾರಿಗೆ ಹಿನ್ನಡೆ? ಇಲ್ಲಿದೆ ಮಾಹಿತಿ

ನವೆಂಬರ್ 23, 2024 - 09:42
 0  9
ಮೂರು ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆ: ಯಾರಿಗೆ ಮುನ್ನಡೆ, ಯಾರಿಗೆ ಹಿನ್ನಡೆ? ಇಲ್ಲಿದೆ ಮಾಹಿತಿ

 

ಕರ್ನಾಟಕದ ಮೂರು ವಿಧಾನಸಭೆ ಕ್ಷೇತ್ರಗಳಿಗೆ ಮತ್ತು ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಮತದಾನ ನಡೆದಿದೆ. ಮಹಾರಾಷ್ಟ್ರ ಮತ್ತು ಜಾರ್ಖಾಂಡ್​​ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಮತದಾನ ಆಗಿದೆ. ಈ ಎಲ್ಲ ಕ್ಷೇತ್ರಗಳ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಕರ್ನಾಟಕದಲ್ಲಿ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಜಿದ್ದಾಜಿದ್ದಿ ಕ್ಷೇತ್ರವಾಗಿವೆ. ಅದರಲ್ಲಂತೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಎನ್​ಡಿಎ ಮೈತ್ರಿಕೂಟ ಮತ್ತು ಕಾಂಗ್ರೆಸ್​ ಮಧ್ಯೆ ಪ್ರತಿಷ್ಠೆಯ ಕಣವಾಗಿದೆ.

ನಾಲ್ಕನೇ ಸುತ್ತಿನ  ಮತ ಎಣಿಕೆಯಲ್ಲೂ ಕಾಂಗ್ರೆಸ್​ ಅಭ್ಯರ್ಥಿ ಅನ್ನಪೂರ್ಣ ಮುನ್ನಡೆ ಕಾಯ್ದುಕೊಂಡಿದ್ದಾರೆ. ಸಂಡೂರಿನಲ್ಲಿ ಕಾಂಗ್ರೆಸ್​​​ ಅಭ್ಯರ್ಥಿ ಅನ್ನಪೂರ್ಣ 1,001 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್​ ಅಭ್ಯರ್ಥಿ ಅನ್ನಪೂರ್ಣ ಅವರಿಗೆ ಈವರೆಗೆ 20,128 ಮತಗಳು ಬಂದಿವೆ. ಸಂಡೂರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತುಗೆ 19,127 ಮತಗಳು ಬಂದಿವೆ.

ಶಿಗ್ಗಾಂವಿಯಲ್ಲಿ ನಾಲ್ಕನೇ ಸುತ್ತಿನಲ್ಲೂ ಭರತ್ ಬೊಮ್ಮಾಯಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್​ ಅಭ್ಯರ್ಥಿ ಯಾಸಿರ್ ಅಹಮದ್​ ಖಾನ್​ ಪಠಾಣ್​ಗಿಂತ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ 1219 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಚನ್ನಪಟ್ಟಣ ಕಾಂಗ್ರೆಸ್​ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್​ ಅವರು 600 ಮತಗಳ ಮುನ್ನಡೆ ಸಾಧಿಸಿದ್ದಾರೆ. ಎನ್​ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿ​​ಗೆ ಹಿನ್ನಡೆಯಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow