ಮೂರು ತಿಂಗಳ ಬಾಣಂತಿ ಅನುಮಾನಾಸ್ಪದ ಸಾವು – ಗಂಡನ ವಿರುದ್ಧ ಕುಟುಂಬಸ್ಥರ ಗಂಭೀರ ಆರೋಪ

ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದಲ್ಲಿ ಮೂರು ತಿಂಗಳ ಬಾಣಂತಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಮೃತೆಯನ್ನು ಅನಿತಾ ನೀಲದಕರ್ (25) ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ಅನಿತಾ ಗಂಡನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಗಂಡ ನಿಲೇಶ್ ಕೊಲೆ ಮಾಡಿ ನಂತರ ನೇಣು ಬಿಗಿದಿದ್ದಾನೆ ಎಂದು ಅನಿತಾ ಕುಟುಂಬಸ್ಥರು ಆರೋಪಿಸಿದ್ದಾರೆ. ಘಟನೆ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು.
ನಾಲ್ಕು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಈ ಜೋಡಿ, ಅನಿತಾ ಪಿಜ್ಜಾ ಹಟ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಪರಿಚಯವಾಗಿ ನಂತರ ರಿಜಿಸ್ಟರ್ ಮದುವೆಯಾಗಿದ್ದರು.
ಘಟನೆಯ ಮಾಹಿತಿ ತಿಳಿದು ಎಸಿಪಿ ಹಾಗೂ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
ನಿಮ್ಮ ಪ್ರತಿಕ್ರಿಯೆ ಏನು?






