ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಬ್ರಿಟಿಷ್ ಸರ್ಕಾರದಿಂದ ವಿಶೇಷ ಪ್ರಶಸ್ತಿ ಘೋಷಣೆ!

ಮಾರ್ಚ್ 20, 2025 - 20:01
 0  9
ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಬ್ರಿಟಿಷ್ ಸರ್ಕಾರದಿಂದ ವಿಶೇಷ ಪ್ರಶಸ್ತಿ ಘೋಷಣೆ!

ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಬ್ರಿಟಿಷ್ ಸರ್ಕಾರವು ಜೀವಮಾನ ಸಾಧನೆ ಪ್ರಶಸ್ತಿಯನ್ನು ಪ್ರದಾನ ಮಾಡಿದೆ. ಮಾರ್ಚ್ 19ರಂದು ಇಂಗ್ಲೆಂಡ್​ನ ಪಾರ್ಲಿಮೆಂಟ್​ನಲ್ಲಿ  ಇದನ್ನು ನೀಡಿ ಗೌರವಿಸಲಾಗಿದೆ. ಇದರಿಂದ ಚಿರಂಜೀವಿ ಅಭಿಮಾನಿಗಳು ಖುಷಿ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರಿಗೆ ಅಭಿನಂದನೆ ಬರುತ್ತಿದೆ.

ಚಿತ್ರರಂಗಕ್ಕೆ ಚಿರಂಜೀವಿ ಅವರು ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರು ಹಲವು ಹಿಟ್ ಚಿತ್ರಗಳನ್ನು ಕೊಟ್ಟಿದ್ದಾರೆ. ಇದರ ಜೊತೆಗೆ ಅವರ ಕಡೆಯಿಂದ ಅನೇಕ ಸಾಮಾಜಿಕ ಕೆಲಸಗಳು ಕೂಡ ಆಗುತ್ತಿವೆ. ಇದೆಲ್ಲವನ್ನೂ ಗಮನಿಸಿದ ಬ್ರಿಟಿಷ್ ಸರ್ಕಾರ ಅವರಿಗೆ ಜೀವಮಾನ ಸಾಧನೆ ಅವಾರ್ಡ್ ನೀಡಿದೆ.

ಚಿರಂಜೀವಿ ಅವರು ಸದ್ಯ ಲಂಡನ್​ನಲ್ಲಿ ಇದ್ದಾರೆ. ಅಲ್ಲಿನ ಸಂಸತ್ತಿನಲ್ಲಿ ಈ ಗೌರವವನ್ನು ನೀಡಲಾಗಿದೆ. ಇದು ಭಾರತದ ಚಿತ್ರರಂಗದ ಪಾಲಿಗೆ ಹೆಮ್ಮೆಯ ಕ್ಷಣವಾಗಿದೆ. ಈ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು, ಸರ್ಕಾರಿ ಅಧಿಕಾರಿಗಳು ಭಾಗಿ ಆಗಿದ್ದರು. ಈ ರೀತಿ ಅವಾರ್ಡ್ ಪಡೆದ ಮೊದಲ ಭಾರತೀಯ ಎಂಬ ಹೆಮ್ಮೆಗೆ ಅವರು ಪಾತ್ರರಾಗಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow