ಮೆಡಿಕಲ್ ಶಾಪ್ʼಗಳಲ್ಲಿ ಸಹ ಸಿಂಥೆಟಿಕ್ ಡ್ರಗ್ಸ್ ಸಿಗುತ್ತಿದೆ: ಡಾ. ಜಿ ಪರಮೇಶ್ವರ್

ಬೆಂಗಳೂರು: ಮೆಡಿಕಲ್ ಶಾಪ್ʼಗಳಲ್ಲಿ ಸಹ ಸಿಂಥೆಟಿಕ್ ಡ್ರಗ್ಸ್ ಸಿಗುತ್ತಿದೆ ಎಂಬ ಮಾಹಿತಿ ಇದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಹೇಳಿದರು. ಬೆಂಗಳೂರಿನ ಸದಾಶಿವನಗರದಲ್ಲಿ ಮಾತನಾಡಿದ ಅವರು, ಮೆಡಿಕಲ್ ಸ್ಟೋರ್ಗಳಲ್ಲಿ ಡ್ರಗ್ಸ್ ದಂಧೆಗೆ ಯಾವ ರೀತಿ ಕಡಿವಾಣ ಹಾಕಬೇಕು ಎಂಬ ಬಗ್ಗೆ ಇಂದು ಸಭೆ ನಡೆಸುತ್ತೇವೆ ಎಂದರು.
ಮೆಡಿಕಲ್ ಸ್ಟೋರ್ಗಳಲ್ಲಿ ಡ್ರಗ್ಸ್ ಮಾರಾಟಕ್ಕೆ ಕಾನೂನೇ ಬೇರೆ ಆಗುತ್ತದೆ. ಔಷಧ ಎಂದು ಹೇಳುತ್ತಾರೆ. ಅದಕ್ಕೆ ಆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ ಮಾಡುತ್ತೇವೆ. ಗಾಂಜಾ ಹಾಗೂ ಇತರೆ ಡ್ರಗ್ಸ್ ನಿಯಂತ್ರಣ ಮಾಡಿದ್ದೇವೆ. ಪ್ರಕರಣಗಳು ಕಡಿಮೆ ಆಗಿವೆ ಎಂದು ಪರಮೇಶ್ವರ ಹೇಳಿದ್ದಾರೆ.
ಇನ್ನೂ ಪ್ಯಾಲೆಸ್ತೀನ್ ಧ್ವಜ ಪ್ರದರ್ಶಿಸಿದ ಪ್ರಕರಣದ ಕುರಿತು ಮಾತನಾಡಿದ ಅವರು, ಮೂರು ಜಿಲ್ಲೆಗಳಲ್ಲಿ ನಮಗೆ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ ಘಟನೆಗಳು ಕಂಡುಬಂದಿವೆ. ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ ಮಾಡಿದವರನ್ನೆಲ್ಲ ಬಂಧನ ಮಾಡಲಾಗಿದೆ. ಆದ್ರೆ ಕೇಂದ್ರ ಸರ್ಕಾರದವರೇ ಪ್ಯಾಲೆಸ್ತೀನ್‌ಗೆ ನಮ್ಮ ಬೆಂಬಲ ಇದೆ ಅಂತ ಹೇಳಿಕೆ ಕೊಟ್ಟಿದ್ದಾರೆ. ಹೀಗಿರುವಾಗ ಧ್ವಜ ತೋರಿಸುವುದರಲ್ಲಿ ತಪ್ಪೇನಿದೆ ಅಂತ ಅವ್ರು ವಾದ ಮಾಡ್ತಾರೆ. ಆದರೂ ಕೂಡ ನಾವು ಅವರನ್ನು ಬಂಧಿಸಿದ್ದೇವೆ ಎಂದು ಹೇಳಿದ್ದಾರೆ.
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






