ಮೇಕಪ್ ಆರ್ಟಿಸ್ಟ್ ಜೊತೆ ಹಸೆಮಣೆ ಏರಲು ಸಜ್ಜಾದ ‘ಲಕ್ಷ್ಮಿ ಬಾರಮ್ಮ’ ನಟ! ಮದುವೆ ಯಾವಾಗ?

ಕಲರ್ಸ್ ವಾಹಿನಿಯಲ್ಲಿ ಈ ಹಿಂದೆ ಪ್ರಸಾರವಾಗುತ್ತಿದ್ದ ಲಕ್ಷ್ಮೀ ಬಾರಮ್ಮ ಸೀರಿಯಲ್ ನಲ್ಲಿ ನಾಯಕ ನಟನಾಗಿ ನಟಿಸಿದ್ದ ಬ್ರೋ ಗೌಡ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಮೇ 21ರಂದು ಮದುವೆ ನಡೆಯಲಿದೆ. ಇದೀಗ ಮದುವೆ ತಯಾರಿ ಜೋರಾಗಿ ನಡೆಯುತ್ತಿದೆ. ಅರಿಶಿನ ಶಾಸ್ತ್ರದಲ್ಲಿ ನಟ ಮಿಂದೆದಿದ್ದಾರೆ
ಕಾಲೇಜ್ ಕಾರ್ಯಕ್ರಮವೊಂದರಲ್ಲಿ ಶಮಂತ್ ಗೆಸ್ಟ್ ಆಗಿ ಆಗಮಿಸಿದ್ದರು. ಅಲ್ಲಿ ಮೇಘನಾ ಪರಿಚಯ ಆಗಿತ್ತು. ಅಲ್ಲಿಂದ ಶುರುವಾದ ಸ್ನೇಹ ಮದುವೆಗೆ ಮುನ್ನುಡಿ ಬರೆದಿದೆ. ಮನೆಯವರ ಸಮ್ಮತಿ ಪಡೆದು ಇತ್ತೀಚೆಗೆ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ಮೇ 21ರಂದು ಇಬ್ಬರ ಮದುವೆ ನಡೆಯಲಿದೆ.
ಶಮಂತ್ ಮೂಲತಃ ಉತ್ತರ ಕರ್ನಾಟಕದವರು. ಶಮಂತ್ ಹಿರೇಮಠ ಅವರ ಪೂರ್ಣ ಹೆಸರು, ಇನ್ನೂ ಮೇಘನಾ ಮರಾಠಿಗರು. ಹೀಗಾಗಿ ಎರಡು ರೀತಿಯ ಪದ್ಧತಿಯಂತೆ ಮದುವೆ ಶಾಸ್ತ್ರಗಳು ನಡೆಯಲಿದೆ.
ನಿಮ್ಮ ಪ್ರತಿಕ್ರಿಯೆ ಏನು?






